You are currently viewing PV NEWS : ಕ್ರೀಡೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸುತ್ತದೆ: ಈರಣ್ಣ ಹಳ್ಳಿಕೇರಿ

PV NEWS : ಕ್ರೀಡೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸುತ್ತದೆ: ಈರಣ್ಣ ಹಳ್ಳಿಕೇರಿ

PV NEWS : ಕ್ರೀಡೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸುತ್ತದೆ: ಈರಣ್ಣ ಹಳ್ಳಿಕೇರಿ

PV NEWS ಕನ್ನಡ 24×7

ಸಮುದಾಯದ ಸಹಕಾರದಿಂದ ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳು ಯಶಸ್ವಿ; ಮಗಳೂರು ಕೆಪಿಎಸ್‌ನಲ್ಲಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಕುಕನೂರು, ಆ. 5: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಆತ್ಮವಿಶ್ವಾಸ ಹಾಗೂ ಧನಾತ್ಮಕ ಮನೋಭಾವವನ್ನು ಬೆಳೆಸುವ ಪ್ರಮುಖ ಸಾಧನಗಳಾಗಿವೆ. ಯುವಜನತೆ ದುಶ್ಚಟಗಳಿಂದ ದೂರವಿದ್ದು, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮಾಜಿ ಎಪಿಎಂಸಿ ಅಧ್ಯಕ್ಷ ಈರಣ್ಣ ಹಳ್ಳಿಕೇರಿ ಹೇಳಿದರು.

ತಾಲೂಕಿನ ಮಗಳೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆವರಣದಲ್ಲಿ ಬುಧವಾರ ನಡೆದ 2026–27ನೇ ಸಾಲಿನ ಮಗಳೂರು ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಇಲಾಖೆಯ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಸ್ಥಳೀಯ ಸಮುದಾಯದ ಸಹಕಾರ ಅತ್ಯಗತ್ಯವಾಗಿದೆ ಎಂದು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಬನ್ನಿಗೋಳ ಹೇಳಿದರು.

ಜಿಲ್ಲಾ ಪಂಚಾಯತ್ ಕೊಪ್ಪಳ, ತಾಲೂಕು ಪಂಚಾಯತ್ ಕುಕನೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೊಪ್ಪಳ ಹಾಗೂ ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಸರ್ಕಾರದ ಅನುದಾನ ಸೀಮಿತವಾಗಿದ್ದರೂ ಗ್ರಾಮಸ್ಥರು, ಹಿರಿಯರು ಹಾಗೂ ಯುವಕರು ಒಗ್ಗೂಡಿ ನೀಡಿದ ಸಹಕಾರದಿಂದ ಕ್ರೀಡಾಕೂಟ ಹಬ್ಬದ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಬನ್ನಿಗೋಳ ಮೆಚ್ಚುಗೆ ವ್ಯಕ್ತಪಡಿಸಿದರು. “ದೊಡ್ಡ ಕೆಲಸಗಳು ದೊಡ್ಡ ಮನಸ್ಸಿನ ಸಣ್ಣ ವ್ಯಕ್ತಿಗಳಿಂದ ನೆರವೇರುತ್ತವೆ” ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ನುಡಿಯನ್ನು ಉಲ್ಲೇಖಿಸಿದ ಅವರು, ಗ್ರಾಮಸ್ಥರ ಒಗ್ಗಟ್ಟೇ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಿದೆ ಎಂದರು.

ಕ್ರೀಡೆಯು ಕೇವಲ ಮನರಂಜನೆಗೆ ಸೀಮಿತವಲ್ಲ; ಶಿಸ್ತು, ಸಂಯಮ, ಸರಿ-ತಪ್ಪಿನ ಅರಿವು ಹಾಗೂ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಜೀವನ ಪಾಠವಾಗಿದೆ ಎಂದು ಅವರು ತಿಳಿಸಿದರು. ಕ್ರೀಡಾಪಟುಗಳು ಅಂಪೈರ್‌ಗಳ ತೀರ್ಪನ್ನು ಗೌರವಿಸಿ, ಸೋಲು-ಗೆಲುವಿಗಿಂತ ಭಾಗವಹಿಸುವಿಕೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು.

ವಲಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಮಿಂಚಿ ಶಾಲೆ ಹಾಗೂ ಗ್ರಾಮದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಗಣ್ಯರು ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಕೆಪಿಎಸ್ ಶಾಲೆ ಮುಖ್ಯೋಪಾಧ್ಯಾಯ ಹನುಮಂತಪ್ಪ ಎ ಎಚ್, ಯಲಬುರ್ಗಾ ಕುಕನೂರು ಪ್ರಭಾರಿ ದೈಹಿಕ ಶಿಕ್ಷಣಾಧಿಕಾರಿ, ಶರಣಪ್ಪ ವೀರಾಪುರ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಅನಿಲ್ ಕುಮಾರ್ ಕಲ್ಬಾವಿ, ಬೆವೂರು ಠಾಣೆ ಪಿಎಸ್ಐ ಸಂಗನಗೌಡ, ಮಂಗಳೂರು ಗ್ರಾಮ ಪಂಚಾಯಿತಿಯ ಪಿಡಿಓ ನೀಲಂ ಚಳ್ಳಗೆರೆ, ಬಸವರಾಜ್ ಮೇಟಿ, ದೈಹಿಕ ಶಿಕ್ಷಕರ ಅಧ್ಯಕ್ಷ ಉಮೇಶ್ ಕಂಬಳಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಕ್ರಪ್ಪ ಚಿನ್ನುರು, ಹಿರೇಬೀಡುನಾಳ ರಾವಣಕಿ ಕುದುರೆಮೋತಿ ಮಂಗಳೂರು ವಟಪರವಿ ನೆಲಜೇರಿ ರಾವಣಕಿ-ಮಂಗಳೂರು ವಸತಿ ಶಾಲೆ ಸೇರಿದಂತೆ ಮಂಗಳೂರು ವಲಯದ ಒಟ್ಟು 9 ಶಾಲಾ ಮಕ್ಕಳು ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದರು.

Prajavikshane

Chandru R Bhanapaur

Leave a Reply

error: Content is protected !!