You are currently viewing BREAKING : ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ : 5 ಲಕ್ಷ ರೂ. ಆರ್ಥಿಕ ನೆರವು ಘೋಷಣೆ..!!

BREAKING : ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ : 5 ಲಕ್ಷ ರೂ. ಆರ್ಥಿಕ ನೆರವು ಘೋಷಣೆ..!!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇಂದು ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಸರ್ವರಿಗೂಸೂರು ಯೋಓಜನೆ 10 ಲಕ್ಷ ವಸತಿ ನಿರ್ಮಾಣ, ಒಂದು ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ‘ಜನರ ಹಿತದೃಷ್ಟಿಯಿಮದ ಪ್ರಣಾಳಿಕೆ ತಯಾರಿಸಿದ್ದೇವೆ. ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಕೊಡುತ್ತೇವೆ. ಬಡವರ ಕಲ್ಯಾಣಕ್ಕೆ ನಾವು ಮಹತ್ವ ನೀಡಿದ್ದೇವೆ ಎಂದರು.

ಆಯುಷ್ಮಾನ್ ಭಾರತ್ ರಾಷ್ಟ್ರೀಯ ಆರೋಗ್ಯ ಸಂರಕ್ಷಣಾ ಯೋಜನೆಯ ಕಾರ್ಡ್ ಫಲಾನುಭವಿಗಳ ಚಿಕಿತ್ಸಾ ವೆಚ್ಚವನ್ನು 10 ಲಕ್ಷ ರೂ.ಗೆ ಏರಿಕೆ ಮಾಡಲಾಗುವುದು. 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ ನೀಡಲಾಗುವುದು, ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ದೇಶದ ಪ್ರಮುಖ ಹಬ್ಬಗಳಾದ ಗಣೇಶ ಚತುರ್ಥಿ, ಯುಗಾದಿ, ದೀಪಾವಳಿ ಹಬ್ಬಕ್ಕೆ 3 ಗ್ಯಾಸ್ ಉಚಿತ ಸಿಲಿಂಡರ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

“ಪೋಷಣೆ ಯೋಜನೆ” ಯಡಿಯಲ್ಲಿ ಹಾಲು ವಿತರಣೆ ಕಿಟ್ ವಿತರಣೆ, ಸರ್ವರಿಗೂಸೂರು ಯೋಜನೆ 10 ಲಕ್ಷ ವಸತಿ ನಿರ್ಮಾಣ, ಒಂದು ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!