PV NEWS : ಸ್ವಯಂ ಉದ್ಯೋಗಕ್ಕೆ ಉಚಿತ ತರಬೇತಿ : SBI ಕಡೆಯಿಂದ ಅರ್ಜಿ ಆಹ್ವಾನ..!
PV NEWS ಕನ್ನಡ 24×7|
ಎಸ್‌ಬಿಐ ಆರ್‌ಸೆಟಿ ವತಿಯಿಂದ ವಿವಿಧ ವೃತ್ತಿಪರ ತರಬೇತಿ | ಉಚಿತ ಊಟ, ವಸತಿ ಸೌಲಭ್ಯ
ಕೊಪ್ಪಳ, ಆ. 13 : ಗ್ರಾಮೀಣ ಭಾಗದ ನಿರುದ್ಯೋಗಿ ಯುವಜನರು ಹಾಗೂ ಸ್ವಯಂ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (SBI RSETI), ಕೊಪ್ಪಳ ವತಿಯಿಂದ ವಿವಿಧ ಸ್ವಯಂ ಉದ್ಯೋಗ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಲ್‌ಎಚ್‌ಒ ಬೆಂಗಳೂರು ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಆಶ್ರಯದಲ್ಲಿ ನಡೆಯುವ ತರಬೇತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ತರಬೇತಿಯೊಂದಿಗೆ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗ ಆರಂಭಿಸಲು ಬ್ಯಾಂಕ್ ಸಾಲ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ನೆರವು ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಕುರಿ ಸಾಕಾಣಿಕೆ/ಹೈನುಗಾರಿಕೆ ತರಬೇತಿ 13 ದಿನ, ಅಣಬೆ ಬೇಸಾಯ 10 ದಿನ, ಜೂಟ್ ಬ್ಯಾಗ್ ತಯಾರಿಕೆ 13 ದಿನ ಹಾಗೂ ಫಾಸ್ಟ್‌ಫುಡ್ ಸ್ಟಾಲ್ ಉದ್ಯಮಿ ತರಬೇತಿ 12 ದಿನಗಳ ಅವಧಿಯಲ್ಲಿ ನಡೆಯಲಿದೆ.
ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ 18ರಿಂದ 45 ವರ್ಷದೊಳಗಿನ, ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರುವ ಹಾಗೂ ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್ ಕಾರ್ಡ್, ಎಸ್‌ಬಿಐ ಬ್ಯಾಂಕ್ ಪಾಸ್‌ಬುಕ್, ವಿದ್ಯಾರ್ಹತೆಯ ಅಂಕಪಟ್ಟಿ ಹಾಗೂ ಮೂರು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಆ.24ರಂದು ಸಂದರ್ಶನ
ಅಭ್ಯರ್ಥಿಗಳ ಸಂದರ್ಶನ ಆಗಸ್ಟ್ 24ರಂದು ನಡೆಯಲಿದ್ದು, ಆಯ್ಕೆಯಾದವರಿಗೆ ತರಬೇತಿ ಆಗಸ್ಟ್ 25ರಿಂದ ಆರಂಭವಾಗಲಿದೆ.
ಆಸಕ್ತರು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RSETI), ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ–583231 ವಿಳಾಸಕ್ಕೆ ನೇರವಾಗಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ 08539–231038, 9483618178, 7259073827, 9538096796, 9481085217 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.