PV NEWS : KPSC ಗೆಜೆಟೆಡ್ ಪ್ರೊಬೇಷನರ್ ನೇಮಕಾತಿಗೆ ಹೆಚ್ಚುವರಿ 5 ವರ್ಷ ವಯೋಮಿತಿ ಸಡಿಲಿಕೆ!

PV NEWS ಕನ್ನಡ 24×7 |
ಬೆಂಗಳೂರು, ಆ.14: ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಿಹಿಸುದ್ದಿ ನೀಡಿದೆ. 2026-27ನೇ ಸಾಲಿನ ಗ್ರೂಪ್ ‘A’ ಮತ್ತು ‘B’ ವೃಂದದ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಹೆಚ್ಚುವರಿಯಾಗಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
KPSCಯು ಒಟ್ಟು 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗಾಗಿ ಜುಲೈ 31, 2026ರಂದು ಅಧಿಸೂಚನೆ ಹೊರಡಿಸಿತ್ತು. ಇದರಲ್ಲಿ ಉಳಿಕೆ ಮೂಲ ವೃಂದದ 297 ಹಾಗೂ ಹೈದರಾಬಾದ್-ಕರ್ನಾಟಕ ವೃಂದದ 22 ಹುದ್ದೆಗಳು ಸೇರಿವೆ.
