You are currently viewing PV NEWS : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ಅಂತ್ಯಕ್ರಿಯೆ!

PV NEWS : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ಅಂತ್ಯಕ್ರಿಯೆ!

PV NEWS : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ಅಂತ್ಯಕ್ರಿಯೆ!

PV NEWS ಕನ್ನಡ 24×7: 

ತಿಪಟೂರು (ತುಮಕೂರು) ಆ. 19 : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಅವರು ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಂಡಿದ್ದ ನಾಗೇಶ್ ಅವರು ಆರೋಗ್ಯ ತಪಾಸಣೆಗಾಗಿ ಕಳೆದ ವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಬಳಿಕ ಸಹೋದರಿಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ಅವರು, ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದರು.

ನಾಗೇಶ್ ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಳಿಗ್ಗೆ 9 ಗಂಟೆಯವರೆಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ. ನಂತರ ಪಾರ್ಥಿವ ಶರೀರವನ್ನು ತಿಪಟೂರಿಗೆ ತರಲಾಗಿದ್ದು, ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಗಣ್ಯರಿಂದ ಸಂತಾಪ..!

ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿ, ನಾಗೇಶ್ ಅವರು ಸರಳ, ಸಜ್ಜನ ಹಾಗೂ ಜನಾನುರಾಗಿ ವ್ಯಕ್ತಿತ್ವ ಹೊಂದಿದ್ದರು ಎಂದು ಸ್ಮರಿಸಿದ್ದಾರೆ. ಸಚಿವರಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ಉತ್ತಮ ಕೆಲಸಗಳನ್ನು ಮಾಡಿದ್ದ ಅವರ ನಿಧನ ರಾಜ್ಯಕ್ಕೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ದುಃಖ ತಂದಿದೆ ಎಂದು ತಿಳಿಸಿದ್ದಾರೆ. ಸರಳತೆಯ ಪ್ರತಿರೂಪವಾಗಿದ್ದ ನಾಗೇಶ್ ಅವರು ಅಧಿಕಾರ ಮತ್ತು ಸಚಿವ ಸ್ಥಾನದಲ್ಲಿದ್ದ ಸಂದರ್ಭದಲ್ಲಿಯೂ ಆಡಂಬರದ ಜೀವನದಿಂದ ದೂರವಿದ್ದು, ಸಮಾಜಕ್ಕೆ ಮಾದರಿಯಾಗಿ ಸೇವೆ ಸಲ್ಲಿಸಿದ್ದರು ಎಂದು ಸ್ಮರಿಸಿದ್ದಾರೆ.

ಬಿ.ಸಿ. ನಾಗೇಶ್ ಅವರು ಕರ್ನಾಟಕದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ತಿಪಟೂರು ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದ ಅವರು, ಬಿಜೆಪಿಯಲ್ಲಿ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶೋಕದಲ್ಲಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!