You are currently viewing PV NEWS : ಕುಡಿಯುವ ನೀರು, ಬೀದಿ ದೀಪಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ : ಇಓ ಬೆಟದಪ್ಪ ಮಾಳೆಕೋಪ್ಪ 

PV NEWS : ಕುಡಿಯುವ ನೀರು, ಬೀದಿ ದೀಪಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ : ಇಓ ಬೆಟದಪ್ಪ ಮಾಳೆಕೋಪ್ಪ 

PV NEWS : ಕುಡಿಯುವ ನೀರು, ಬೀದಿ ದೀಪಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ : ಇಓ ಬೆಟದಪ್ಪ ಮಾಳೆಕೋಪ್ಪ 

PV NEWS ಕನ್ನಡ 24*7 : 

ಕುಕನೂರು, ಆ.20 : ತಾಲೂಕಿನ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಕುಡಿಯುವ ನೀರಿನ ಸ್ಥಾವರಗಳು ಹಾಗೂ ಬೀದಿ ದೀಪಗಳ ವಿದ್ಯುತ್ ಬಿಲ್‌ಗಳ ಮರುಹೊಂದಾಣಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬೆಟದಪ್ಪ ಮಾಳೆಕೋಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕುಕನೂರು ಎಪಿಎಂಸಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಿವಾರು ವಿದ್ಯುತ್ ಬಿಲ್‌ಗಳ ಪ್ರಸ್ತುತ ಸ್ಥಿತಿಗತಿ, ಬಾಕಿ ಮೊತ್ತ ಹಾಗೂ ಮರುಹೊಂದಾಣಿಕೆ ಪ್ರಕ್ರಿಯೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕುಡಿಯುವ ನೀರಿನ ಸ್ಥಾವರಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ನಿರಂತರ ಕುಡಿಯುವ ನೀರು ಪೂರೈಕೆ ಹಾಗೂ ಬೀದಿ ದೀಪಗಳ ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ವಿದ್ಯುತ್ ಬಿಲ್‌ಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರ ಬಗೆಹರಿಸಬೇಕು. ಪ್ರತಿ ಗ್ರಾಮ ಪಂಚಾಯತಿಯ ಬಾಕಿ ವಿದ್ಯುತ್ ಬಿಲ್ ಹಾಗೂ ಮರುಹೊಂದಾಣಿಕೆಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸಾಯೆಬಣ್ಣ, ಜೆಸ್ಕಾಂ ಎಇಇ ನಾಗರಾಜ್, ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಆನಂದ ಗರೂರ, ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಶರಣಪ್ಪ ಕೆಳಗಿನಮನಿ, 15 ಗ್ರಾಮ ಪಂಚಾಯತಿಗಳ ಪಿಡಿಒಗಳು, ತಾಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ವಿ.ಬಿ.ಜಿ. ರಾಮ್‌ಜಿ ಸಿಬ್ಬಂದಿ ಉಪಸ್ಥಿತರಿದ್ದರು.

Prajavikshane

Chandru R Bhanapaur

Leave a Reply

error: Content is protected !!