You are currently viewing ಮುದಗಲ್ಲ ಪಟ್ಟಣದ ನೀರಿನ ಸಮಸ್ಯೆ ಬಗೆಹರಿಸಲು ರಾಯಚೂರು ಜಿಲ್ಲಾಧಿಕಾರಿ ಯಾದ ಪೂವಿತಾ ಎಸ್. ಅವರಿಗೆ ಮನವಿ..

ಮುದಗಲ್ಲ ಪಟ್ಟಣದ ನೀರಿನ ಸಮಸ್ಯೆ ಬಗೆಹರಿಸಲು ರಾಯಚೂರು ಜಿಲ್ಲಾಧಿಕಾರಿ ಯಾದ ಪೂವಿತಾ ಎಸ್. ಅವರಿಗೆ ಮನವಿ..

ಮುದಗಲ್ಲ ವರದಿ…

ಮುದಗಲ್ಲ ಪಟ್ಟಣದ ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಯಾದ ಪೂವಿತಾ ಎಸ್. ಅವರಿಗೆ ಮನವಿ..

ಮುದಗಲ್ಲ :- ಪಟ್ಟಣದಲ್ಲಿ ತೀವ್ರವಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಆಗ್ರಹಿಸಿ ಮುದಗಲ್ ತಾಲ್ಲೂಕು ರಚನೆ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಪುವಿತಾ ಎಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಮರ್ಪಕವಾಗಿ ನೀರು ಪೂರೈಕೆಯಾಗದೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬೇಸಿಗೆಯ ದಿನಗಳಲ್ಲಿ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದ್ದು, ಕುಡಿಯುವ ನೀರಿಗಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಪಟ್ಟಣದ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಸದಸ್ಯರು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಜೀವ ಛಲವಾದಿ,
ಮೌನೇಶ ಶಿವನಗುತ್ತಿ,ದಾವುದ ನದಾಫ
ಇಕ್ಬಾಲ್ ಬೇಗ, ಮಾರುತಿ ಛಲವಾದಿಉಪಸ್ಥಿತರಿದ್ದರು 

ವರದಿ:-ಮಂಜುನಾಥ ಕುಂಬಾರ

Prajavikshane

Chandru R Bhanapaur

Leave a Reply

error: Content is protected !!