You are currently viewing PV NEWS : ಕೊಪ್ಪಳ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಈ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಆರಂಭ!

PV NEWS : ಕೊಪ್ಪಳ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಈ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಆರಂಭ!

PV NEWS : ಕೊಪ್ಪಳ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಈ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಆರಂಭ!

PV NEWS ಕನ್ನಡ 24×7: 

ಕೊಪ್ಪಳ, ಆ.25: ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸರ್ಕಾರಿ ಸೇವೆ ಪ್ರವೇಶಿಸಲು ಇದೊಂದು ಉತ್ತಮ ಅವಕಾಶವಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ಕೊಪ್ಪಳ ವತಿಯಿಂದ ಆ.24ರಂದು ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯ ಐದು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಒಟ್ಟು 28 ಅಂಗನವಾಡಿ ಕಾರ್ಯಕರ್ತೆ ಹಾಗೂ 187 ಅಂಗನವಾಡಿ ಸಹಾಯಕಿ ಸೇರಿದಂತೆ 215 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆವಾರು ಹುದ್ದೆಗಳ ಪೈಕಿ ಯಲಬುರ್ಗಾ ಯೋಜನೆಯಲ್ಲಿ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 24 ಸಹಾಯಕಿ, ಗಂಗಾವತಿಯಲ್ಲಿ 6 ಕಾರ್ಯಕರ್ತೆ ಹಾಗೂ 55 ಸಹಾಯಕಿ, ಕನಕಗಿರಿಯಲ್ಲಿ 4 ಕಾರ್ಯಕರ್ತೆ ಹಾಗೂ 35 ಸಹಾಯಕಿ, ಕೊಪ್ಪಳದಲ್ಲಿ 8 ಕಾರ್ಯಕರ್ತೆ ಹಾಗೂ 51 ಸಹಾಯಕಿ ಹಾಗೂ ಕುಷ್ಟಗಿ ಯೋಜನೆಯಲ್ಲಿ 3 ಕಾರ್ಯಕರ್ತೆ ಮತ್ತು 22 ಸಹಾಯಕಿ ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಕೆ ಆ.25ರಿಂದ ಆರಂಭವಾಗಿದ್ದು, ಸೆ.24, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಜಾಲತಾಣ koppal.nic.in ಮೂಲಕ ನಿಗದಿತ ಅವಧಿಯೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕೊಪ್ಪಳದ ಹೊಸಪೇಟೆ ರಸ್ತೆಯ ಜಿಲ್ಲಾ ಆಡಳಿತ ಭವನ ಸಂಕೀರ್ಣದ ಒಂದನೇ ಮಹಡಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

Prajavikshane

Chandru R Bhanapaur

Leave a Reply

error: Content is protected !!