You are currently viewing BREAKING : ಕುಕನೂರು | ಬನ್ನಿಕೊಪ್ಪ ಬಳಿ ಭೀಕರ ಅಪಘಾತ: ಪಲ್ಸರ್ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

BREAKING : ಕುಕನೂರು | ಬನ್ನಿಕೊಪ್ಪ ಬಳಿ ಭೀಕರ ಅಪಘಾತ: ಪಲ್ಸರ್ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

BREAKING : ಕುಕನೂರು | ಬನ್ನಿಕೊಪ್ಪ ಬಳಿ ಭೀಕರ ಅಪಘಾತ: ಪಲ್ಸರ್ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

PV NEWS ಕನ್ನಡ 24×7| 

ಕುಕನೂರು, ಆ 26: ಗದಗ ಕಡೆಯಿಂದ ಕೊಪ್ಪಳದತ್ತ ತೆರಳುತ್ತಿದ್ದ ಪಲ್ಸರ್ ಬೈಕ್‌ವೊಂದು ಬನ್ನಿಕೊಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ ಟಾಟಾ ಸುಮೋ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ವೇಗವಾಗಿ ಬಂದ ಬೈಕ್‌ ಸವಾರರು ರಸ್ತೆಬದಿಯಲ್ಲಿ ನಿಂತಿದ್ದ ಗೂಡ್ಸ್ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಮೂವರಿಗೂ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಅಪಘಾತದ ಭೀಕರತೆಗೆ ರಸ್ತೆಯ ಮೇಲೆ ರಕ್ತದ ಕಲೆಗಳು, ಗಾಯಗೊಂಡ ಸ್ಥಿತಿಯಲ್ಲಿ ಬಿದ್ದಿದ್ದ ಸವಾರರು ಹಾಗೂ ಹಾನಿಗೊಳಗಾದ ಬೈಕ್‌ ಕಂಡುಬಂದಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸುವಂತಿತ್ತು. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ಕಲೆಹಾಕಿದ್ದಾರೆ. ಮೃತರ ಗುರುತು ಹಾಗೂ ಅಪಘಾತಕ್ಕೆ ನಿಖರ ಕಾರಣ ಸೇರಿದಂತೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಭೀಕರ ಅಪಘಾತವು ಅತಿವೇಗದ ಚಾಲನೆಯ ಅಪಾಯದ ಕುರಿತು ಮತ್ತೊಮ್ಮೆ ಎಚ್ಚರಿಕೆ ಮೂಡಿಸಿದೆ.

PV NEWS ಕನ್ನಡ 24×7 | ಇದು ಪ್ರಜೆಗಳ ಪರ ಹದ್ದಿನ ಕಣ್ಣು

Prajavikshane

Chandru R Bhanapaur

Leave a Reply

error: Content is protected !!