PV NEWS : ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ನಾಗೇಂದ್ರ; ಬಿಜೆಪಿಗೆ ತೀವ್ರ ವಾಗ್ದಾಳಿ
PV NEWS ಕನ್ನಡ 24×7
ಬೆಂಗಳೂರು, ಆ 28 : ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಮಾಜಿ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಇದೇ ವೇಳೆ ವಿರೋಧ ಪಕ್ಷದ ಬಿಜೆಪಿ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸದನದ ಕಲಾಪ ಸುಗಮವಾಗಿ ನಡೆಯಲು ಅವಕಾಶ ನೀಡದೆ, ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ನಡೆಸುವುದಕ್ಕೂ ಪ್ರತಿಪಕ್ಷ ಅಡ್ಡಿಪಡಿಸುತ್ತಿದೆ ಎಂದು ನಾಗೇಂದ್ರ ಆರೋಪಿಸಿದರು.
ವಿರೋಧ ಪಕ್ಷದ ನಾಯಕರ ನಡೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದ ಅವರು, “ಇದು ಪುರಾಣ, ವೇದಗಳ ಕಾಲವಲ್ಲ. ಇದು ಸಂವಿಧಾನದ ಕಾಲ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಯುಗ ಎಂಬುದನ್ನು ವಿರೋಧ ಪಕ್ಷದವರು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದರು.
ಇಂದಿಗೂ ಮನುಸ್ಮೃತಿಯ ವಿಚಾರಧಾರೆಯನ್ನು ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ನಾಗೇಂದ್ರ, ಪ್ರಸ್ತುತ ದೇಶವು ಸಂವಿಧಾನದ ಆಶಯಗಳ ಆಧಾರದ ಮೇಲೆ ಮುನ್ನಡೆಯುತ್ತಿದೆ ಎಂದು ಪ್ರತಿಪಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ಮಾತನಾಡಿದ ನಾಗೇಂದ್ರ ಅವರ ರಾಜೀನಾಮೆ ಘೋಷಣೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.