You are currently viewing BREAKING : ಕುಕನೂರು | ಬೆದವಟ್ಟಿ ಗ್ರಾಮದ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ನವಜಾತ ಗಂಡು ಶಿಶು ಶವವಾಗಿ ಪತ್ತೆ!

BREAKING : ಕುಕನೂರು | ಬೆದವಟ್ಟಿ ಗ್ರಾಮದ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ನವಜಾತ ಗಂಡು ಶಿಶು ಶವವಾಗಿ ಪತ್ತೆ!

BREAKING : ಕುಕನೂರು | ಬೆದವಟ್ಟಿ ಗ್ರಾಮದ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ನವಜಾತ ಗಂಡು ಶಿಶು ಶವವಾಗಿ ಪತ್ತೆ!

PV NEWS ಕನ್ನಡ 24×7: 

ಕುಕನೂರು, ಸೆ.01: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆದವಟ್ಟಿ ಗ್ರಾಮದ ಸಮೀಪದ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ನವಜಾತ ಗಂಡು ಶಿಶುವೊಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆದವಟ್ಟಿ ಗ್ರಾಮದ ಪಕ್ಕದಲ್ಲಿರುವ ಬ್ರಿಜ್ ಕಮ್ ಬ್ಯಾರೇಜ್‌ನ ಬಳಿ ಬೃಹತ್ ಆಕಾರದ ಜಲಜೀವನ್ ಮಿಷನ್ ನೀರಿನ ಪೈಪ್ ಸಮೀಪ ಈ ಘಟನೆ ನಡೆದಿದೆ. ಬ್ಯಾರೇಜ್‌ನಲ್ಲಿ ಸಾಕಷ್ಟು ಪ್ರಮಾಣದ ನೀರು ಸಂಗ್ರಹವಾಗಿದ್ದು, ಇದೇ ನೀರಿನಲ್ಲಿ ಶಿಶುವಿನ ಶವ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಹಾಗೂ ಆಘಾತಕ್ಕೆ ಕಾರಣವಾಗಿದೆ.

ಶಿಶುವಿನ ಶವ ನೀರಿನಲ್ಲಿ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿಶುವಿನ ಶವ ನೀರಿನಲ್ಲಿ ಎಷ್ಟು ಸಮಯದಿಂದ ಇತ್ತು ಎಂಬುದು ಸದ್ಯಕ್ಕೆ ಖಚಿತವಾಗಿಲ್ಲ. ಸ್ಥಳೀಯರಲ್ಲಿ ಕಳೆದ ಎರಡು-ಮೂರು ದಿನಗಳ ಹಿಂದೆ ಶಿಶುವನ್ನು ನೀರಿಗೆ ಎಸೆದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆಯಿಂದಲೇ ಸ್ಪಷ್ಟತೆ ದೊರೆಯಬೇಕಿದೆ.

ನವಜಾತ ಶಿಶುವನ್ನು ನೀರಿಗೆ ಎಸೆದು ಹೋಗಿರುವುದೇ ಅಥವಾ ಬೇರೆ ಯಾವುದೇ ಕಾರಣದಿಂದ ಘಟನೆ ಸಂಭವಿಸಿದೆಯೇ ಎಂಬುದೂ ತನಿಖೆಯಿಂದ ತಿಳಿದುಬರಬೇಕಿದೆ. ಶಿಶುವಿನ ಗುರುತು ಹಾಗೂ ಘಟನೆಯ ಹಿಂದಿರುವ ವ್ಯಕ್ತಿಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಯಿಂದ ಬೆದವಟ್ಟಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಬಹಿರಂಗವಾಗಬೇಕಿದೆ.

Prajavikshane

Chandru R Bhanapaur

Leave a Reply

error: Content is protected !!