You are currently viewing PV NEWS : ಗೋರ ಸೇನಾ, ಗೋರ ಸಿಕವಾಡಿ ಸಂಘಟನೆ ವತಿಯಿಂದ ಕುಕನೂರಿನಲ್ಲಿ ನಾಳೆ ಬೃಹತ್ ಉಚಿತ ಆರೋಗ್ಯ ಶಿಬಿರ..!

PV NEWS : ಗೋರ ಸೇನಾ, ಗೋರ ಸಿಕವಾಡಿ ಸಂಘಟನೆ ವತಿಯಿಂದ ಕುಕನೂರಿನಲ್ಲಿ ನಾಳೆ ಬೃಹತ್ ಉಚಿತ ಆರೋಗ್ಯ ಶಿಬಿರ..!

PV NEWS : ಗೋರ ಸೇನಾ, ಗೋರ ಸಿಕವಾಡಿ ಸಂಘಟನೆ ವತಿಯಿಂದ ಕುಕನೂರಿನಲ್ಲಿ ನಾಳೆ ಬೃಹತ್ ಉಚಿತ ಆರೋಗ್ಯ ಶಿಬಿರ..!

ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆಯಲು ನಾಗರಿಕರಿಗೆ ಮನವಿ

ಕುಕನೂರು, ಸೆ.4: ಮುಂಡರಗಿ ಶ್ರೀ ಅನ್ನದಾನೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗೋರ ಸೇನಾ, ಗೋರ ಸಿಕವಾಡಿ ಸಂಘಟನೆ ವತಿಯಿಂದ ಸೆ.5ರಂದು ಕುಕನೂರಿನ ಶ್ರೀ ಅನ್ನದಾನೀಶ್ವರ ಮಠದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿದೆ.

ಗೋರ ಸೇನಾ, ಗೋರ ಸಿಕವಾಡಿ ಕುಕನೂರು–ಯಲಬುರ್ಗಾ ತಾಲೂಕು ಘಟಕ ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಯೋಗದಲ್ಲಿ ಶಿಬಿರ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ಪೂಜ್ಯ ಶ್ರೀ ಮಹಾದೇವ ದೇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಶಿಬಿರದಲ್ಲಿ ಸಪ್ತಗಿರಿ ಆಸ್ಪತ್ರೆಯ ನುರಿತ ವೈದ್ಯರಿಂದ ಹೃದಯ ಸಂಬಂಧಿ ಕಾಯಿಲೆ, ಮೂತ್ರಪಿಂಡ ಸಮಸ್ಯೆ, ನರರೋಗ ಸೇರಿದಂತೆ ವಿವಿಧ ಕಾಯಿಲೆಗಳ ಉಚಿತ ತಪಾಸಣೆ ನಡೆಸಲಾಗುತ್ತದೆ. ಅಲ್ಲದೆ, ಬಿಪಿ, ಇಸಿಜಿ ಹಾಗೂ ಎಕೋ ಸ್ಕ್ಯಾನಿಂಗ್ ಸೌಲಭ್ಯವೂ ಉಚಿತವಾಗಿ ದೊರೆಯಲಿದೆ.

ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಗೆ ಕರೆದೊಯ್ದು ಉಚಿತ ಚಿಕಿತ್ಸೆ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಶಿಬಿರದಿಂದ ಬೆಂಗಳೂರಿಗೆ ತೆರಳಲು ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ.

ಶಿಬಿರಕ್ಕೆ ಆಗಮಿಸುವ ಸಾರ್ವಜನಿಕರು ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ಕಡ್ಡಾಯವಾಗಿ ತರಬೇಕು ಎಂದು ಆಯೋಜಕರು ತಿಳಿಸಿದ್ದಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗೋರ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಸುರೇಶ ಬಳೂಟಗಿ ಮನವಿ ಮಾಡಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!