PV NEWS : ಕುಕನೂರು ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಮೌನೇಶ್ ರಾಠೋಡ್!, SP ನಾಯ್ಕ್ ನಿರ್ಗಮನ..!
ಎಸ್.ಪಿ. ನಾಯ್ಕ್‌ಗೆ ಹೊಸಪೇಟೆ ಟ್ರಾಫಿಕ್ ಪೊಲೀಸ್ ಠಾಣೆಗೆ ವರ್ಗಾವಣೆ
PV NEWS ಕನ್ನಡ 24×7:
ಕುಕನೂರು, ಸೆ 13: ಕುಕನೂರು ಪೊಲೀಸ್ ಠಾಣೆಗೆ ನೂತನ ಪೊಲೀಸ್ ಉಪನಿರೀಕ್ಷಕರಾಗಿ (ಪಿಎಸ್ಐ) ಮೌನೇಶ್ ರಾಥೋಡ್ ಅವರು ನೇಮಕಗೊಂಡಿದ್ದು, ಇಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ಮೌನೇಶ್ ರಾಥೋಡ್ ಅವರು ಈ ಹಿಂದೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಕುಕನೂರು ಪೊಲೀಸ್ ಠಾಣೆಗೆ ಪಿಎಸ್ಐ ಆಗಿ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.
ಇದೇ ವೇಳೆ, ಕುಕನೂರು ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಪಿ. ನಾಯ್ಕ್ ಅವರನ್ನು ಹೊಸಪೇಟೆ ಟ್ರಾಫಿಕ್ ಪೊಲೀಸ್ ಠಾಣೆಗೆ ಪಿಎಸ್ಐ ಆಗಿ ವರ್ಗಾವಣೆ ಮಾಡಲಾಗಿದೆ.
ಕುಕನೂರು ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ನಿಯಂತ್ರಣ, ಸಂಚಾರ ನಿಯಮಗಳ ಪಾಲನೆ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ನೂತನ ಪಿಎಸ್ಐ ಮೌನೇಶ್ ರಾಥೋಡ್ ಅವರ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.