PV NEWS : ಕಲ್ಯಾಣ ಕರ್ನಾಟಕ ಉತ್ಸವ: ಏಳು ಜಿಲ್ಲೆಗಳಲ್ಲಿ ಸಚಿವರಿಂದ ಧ್ವಜಾರೋಹಣ!

PV NEWS ಕನ್ನಡ 24×7|
ಬೆಂಗಳೂರು, ಸೆ.16 : ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕದ ಏಳು ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿರುವ ಸರ್ಕಾರಿ ಸಮಾರಂಭಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ರಾಜ್ಯ ಸರ್ಕಾರ ನಿಯೋಜಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಟಾಚಾರ ವಿಭಾಗ ಈ ಕುರಿತು ಆದೇಶ ಹೊರಡಿಸಿದ್ದು, ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದೆ.
