Post Views: 79
ಮುದಗಲ್ಲ ವರದಿ..
ಮುದಗಲ್ಲ ಪುರಸಭೆ ವತಿಯಿಂದ ವಿಶ್ವಕರ್ಮ ಜಯಂತಿ ಸರಳ ಆಚರಣೆ..
ಮುದಗಲ್ಲ :-ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮ ರಣೀಯ ಕೊಡುಗೆ ನೀಡಿದೆ ಪುರಸಭೆ ಮುಖ್ಯಾಧಿಕಾರಿ ಪ್ರವೀಣ್ ಕುಮಾರ್ ಬೋಗರಾ ಎಂದು ವಿಶ್ವಕರ್ಮರ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ಎಂದರು.

ಸಮಾಜ ಮುಖಂಡ ರಾದ ಶ್ರೀಧರ ಪತ್ತಾರ,ಅವರು ಮಾತನಾಡಿ, ‘ಯಾವುದೇ ಕಾಲಗಟ್ಟದ ಇತಿಹಾಸವನ್ನು ಆ ಪ್ರದೇಶದ ವಾಸ್ತುಶಿಲ್ಪ ಕಲೆಗಳನ್ನು ಅಭ್ಯಾಸ ಮಾಡುವುದರ ಮೂಲಕ ಅರಿಯಬಹುದು. ವಿಶ್ವಕರ್ಮರ ಚಿತ್ರಪಟಗಳ ಕೆತ್ತನೆ ಹೆಚ್ಚು ಶ್ರೀಮಂತಿಕೆಯಿಂದ ಕೂಡಿರುವುದು ಕಂಡುಬರುತ್ತದೆ’ ಹಾಗೂ ವಿಶ್ವಕರ್ಮರ ಕೆತ್ತನೆ ಕಾರ್ಯಗಳ ಕಲೆಯು ಇಂದಿನ ಸಮಾಜಕ್ಕೆ ಕೊಡುಗೆ ನೀಡಿರುವುದನ್ನು ನಾವೆಲ್ಲರೂ ಸ್ಮರಿಸಬೇಕಾಗಿದೆ. ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರದಲ್ಲಿ ಅಮರ ಶಿಲ್ಪಿ ಜಕ್ಕಣಾಚಾರಿ ಅವರು ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ’ ಎಂದರು
ಈ ಸಂದರ್ಭದಲ್ಲಿ ಪುರಸಭೆ ಸಿಬ್ಬಂದಿ ಸೇರಿ ವಿಶ್ವಕಮ೯ ಸಮಾಜದ ಮುಖಂಡರಾದ ನಾರಾಯಣಪ್ಪ ಪತ್ತಾರ, ಶ್ರೀಕಾಂತ ಪತ್ತಾರ, ಚಿನ್ನಪ್ಪ ಪತ್ತಾರ, ರವಿಕುಮಾರ ಕಮ್ಮಾರ, ಮಾನಪ್ಪ ಪತ್ತಾರ , ಸಂಪತ್ತು ಕುಮಾರ್ ,ವೆಂಕಣ್ಣ ದೇಶಪಾಂಡೆ ಸೇರಿದಂತೆ ಉಪಸ್ಥಿತರಿದ್ದರು.
ವರದಿ :ಮಂಜುನಾಥ ಕುಂಬಾರ
