You are currently viewing PV NEWS : ‘ಪ್ರಜಾಸೇವಾ ಆಂದೋಲನ’ದಲ್ಲಿ ಜನರ ಅಹವಾಲು ಸ್ವೀಕಾರ | 15 ದಿನಗಳಲ್ಲಿ ವಿಲೇವಾರಿಗೆ ಕ್ರಮ : ತಹಶೀಲ್ದಾರ್ ಬಸವರಾಜ್ ಬೆಣ್ಣೆಶಿರೂರು

PV NEWS : ‘ಪ್ರಜಾಸೇವಾ ಆಂದೋಲನ’ದಲ್ಲಿ ಜನರ ಅಹವಾಲು ಸ್ವೀಕಾರ | 15 ದಿನಗಳಲ್ಲಿ ವಿಲೇವಾರಿಗೆ ಕ್ರಮ : ತಹಶೀಲ್ದಾರ್ ಬಸವರಾಜ್ ಬೆಣ್ಣೆಶಿರೂರು

PV NEWS : ‘ಪ್ರಜಾಸೇವಾ ಆಂದೋಲನ’ದಲ್ಲಿ ಜನರ ಅಹವಾಲು ಸ್ವೀಕಾರ | 15 ದಿನಗಳಲ್ಲಿ ವಿಲೇವಾರಿಗೆ ಕ್ರಮ : ತಹಶೀಲ್ದಾರ್ ಬಸವರಾಜ್ ಬೆಣ್ಣೆಶಿರೂರು

PV NEWS ಕನ್ನಡ 24×7| 

ಕುಕನೂರು, ಸೆ.19: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವ ಉದ್ದೇಶದಿಂದ ತಾಲೂಕು ಆಡಳಿತದಿಂದ ಪ್ರತಿ ಶನಿವಾರ ‘ಪ್ರಜಾಸೇವಾ ಆಂದೋಲನ’ (ಪ್ರಜಾಸೇವೆ) ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಹಶೀಲ್ದಾರ್ ಬಸವರಾಜ್ ಬೆಣ್ಣೆಶಿರೂರು ತಿಳಿಸಿದರು.

ಇಂದು ವಿದ್ಯಾನಂದ ಗುರುಕುಲ ಕಾಲೇಜು ಆವರಣದಲ್ಲಿ ತಾಲೂಕ ಆಡಳಿತ ಮತ್ತು ತಾಲೂಕ ಪಂಚಾಯತ್ ವತಿಯಿಂದ “ಪ್ರಜಾಸೇವಾ ಆಂದೋಲನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮ ಉದ್ಘಾಟನೆಮಾಡಿ ಮಾತನಾಡಿದ ಬಸವರಾಜ್ ಬೆಣ್ಣೆಶಿರೂರು, ‘ಸಾರ್ವಜನಿಕರ ಕುಂದುಕೊರತೆ, ಪಿಂಚಣಿ, ರೇಷನ್‌ಕಾರ್ಡ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಅರ್ಜಿಗಳನ್ನು ಸ್ಥಳದಲ್ಲೇ ಸ್ವೀಕರಿಸಿ, ಆನ್‌ಲೈನ್‌ನಲ್ಲಿ ದಾಖಲಿಸಲಾಗುವುದು. ಅರ್ಜಿಗಳನ್ನು ಪರಿಶೀಲಿಸಿ 15 ದಿನಗಳೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಂಗಳೂರು ಹೋಬಳಿ ಮಟ್ಟದಲ್ಲಿ ನಡೆದ ಹಿಂದಿನ ಕಾರ್ಯಕ್ರಮದಲ್ಲಿ 116 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಸಂಬಂಧಿಸಿದ ಇಲಾಖೆಗೆ ಕಳುಹಿಸಲಾಗಿದೆ. ಕೆಲವು ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕು ಪಂಚಾಯಿತಿ ಇಒ ಬೆಟ್ಟದಪ್ಪ ಮಾಳೆಕೊಪ್ಪ ಮಾತನಾಡಿ, ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರ ಆಶಯದಂತೆ ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಿಡಬ್ಲ್ಯೂಡಿ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಲಭ್ಯವಿದ್ದು, ಸಲ್ಲಿಕೆಯಾಗುವ ಅರ್ಜಿಗಳಿಗೆ 15 ದಿನಗಳ ಕಾಲಮಿತಿಯಲ್ಲಿ ಕಾನೂನುಬದ್ಧವಾಗಿ ಸೇವೆ ಒದಗಿಸಲು ತಾಲೂಕು ಆಡಳಿತ ಸಿದ್ಧವಿದೆ ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಮುಧೋಳ್ ಮಾತನಾಡಿ, ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಪ್ರತಿಯೊಬ್ಬ ಸಾರ್ವಜನಿಕರಿಗೂ ನೇರವಾಗಿ ತಲುಪಬೇಕು ಎಂಬ ಉದ್ದೇಶದಿಂದ ಪ್ರಜಾಸೇವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆಶಿಸಿದರು.

ಕಂದಾಯ, ಆರ್‌ಡಿಪಿಆರ್, ಕೃಷಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತಾಲೂಕು ಮಟ್ಟದಲ್ಲಿ ಬಗೆಹರಿಯದ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಪ. ಪಂ. ಉಪಾಧ್ಯಕ್ಷೆ ಮಂಜುಳಾ ಕಲ್ಮನಿ, /SC ದೌರ್ಜನ್ಯ ತಡೆ ಸಮಿತಿಯ ಸದಸ್ಯ ಯಮನೂರಪ್ಪ ಗೊರ್ಲೆಕೊಪ್ಪ, ಪರಮೀದ್ ಅಹಮ್ಮದ್ ಭೂ ಧಾಖಲೆ, PWD ಉಪ ವಿಭಾಗಾಧಿಕಾರಿ ಮಲ್ಲಿಕಾರ್ಜುನ, ಹಾಗೂ ತಾಲೂಕ ಸಮಾಜ ಕಲ್ಯಾಣ ಇಲಾಖೆ ಸಹಾಯಕ ಉಪ ನಿರ್ದೇಶಕ ಶಶಿಧರ್ ಸಕ್ರಿ,  ತಾಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PV NEWS ಕನ್ನಡ 24×7 | ಕುಕನೂರು

Prajavikshane

Chandru R Bhanapaur

Leave a Reply

error: Content is protected !!