You are currently viewing PV NEWS : ಕುಕನೂರು | ಪ್ರತಾಪ್ ಸಿಂಹ ವಿರುದ್ಧ ಡಿಎಸ್ಎಸ್ ಮುಖಂಡರ ಆಕ್ರೋಶ! 

PV NEWS : ಕುಕನೂರು | ಪ್ರತಾಪ್ ಸಿಂಹ ವಿರುದ್ಧ ಡಿಎಸ್ಎಸ್ ಮುಖಂಡರ ಆಕ್ರೋಶ! 

PV NEWS : ಕುಕನೂರು | ಪ್ರತಾಪ್ ಸಿಂಹ ವಿರುದ್ಧ ಡಿಎಸ್ಎಸ್ ಮುಖಂಡರ ಆಕ್ರೋಶ! 

ಡಿಎಸ್ಎಸ್ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ; ಬಹಿರಂಗ ಕ್ಷಮೆಯಾಚನೆಗೆ ಆಗ್ರಹ!

PV NEWS ಕನ್ನಡ 24×7| 

ಕುಕನೂರು, ಸೆ 21 : ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರಿನ ಮಾಜಿ ಸಂಸದ ಹಾಗೂ ಬಿಜೆಪಿ ನಾಯಕ ಪ್ರತಾಪ್ ಸಿಂಹ ವಿರುದ್ಧ ಕುಕನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಿಎಸ್ಎಸ್ ಮುಖಂಡರು ಪತ್ರಿಕಾಗೋಷ್ಠಿ ಹಮ್ಮಿಕೊಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಎಸ್ಎಸ್ ಮುಖಂಡ ಹನುಮೇಶ್ ಕಡೆಮನಿ, ತಾವು 1992ರಿಂದಲೂ ಡಿಎಸ್ಎಸ್ ಸಂಘಟನೆಯೊಂದಿಗೆ ಗುರುತಿಸಿಕೊಂಡು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಸಂಘಟನೆಯಲ್ಲಿರುವವರು ವೈಯಕ್ತಿಕವಾಗಿ ಬಿಜೆಪಿ, ಕಾಂಗ್ರೆಸ್ ಅಥವಾ ಜೆಡಿಎಸ್ ಸೇರಿದಂತೆ ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಳ್ಳುವ ಹಕ್ಕು ಹೊಂದಿದ್ದಾರೆ. ಆದರೆ ಡಿಎಸ್ಎಸ್‌ನ ಹೋರಾಟ ಮಾತ್ರ ಪಕ್ಷಾತೀತವಾಗಿದೆ ಎಂದು ಸ್ಪಷ್ಟಪಡಿಸಿದರು. ಪ್ರತಾಪ್ ಸಿಂಹ ಅವರು ದಲಿತರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆಗಳಿಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಡಿಎಸ್ಎಸ್ ನಾಯಕ ಛತ್ರಪ್ಪ ಚಲವಾದಿ ಮಾತನಾಡಿ, ನೀಲಿ ಶಾಲು ದಲಿತರ ಅಸ್ಮಿತೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ–ಸಿದ್ಧಾಂತಗಳ ಸಂಕೇತವಾಗಿದೆ. ಅಂಬೇಡ್ಕರ್ ಅವರ ವಿಚಾರಗಳನ್ನು ಸರಿಯಾಗಿ ಅಧ್ಯಯನ ಮಾಡದೆ ಅವರ ಕುರಿತು ಹೇಳಿಕೆ ನೀಡುವುದು ಸರಿಯಲ್ಲ. ದಲಿತ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತರುವ ಹೇಳಿಕೆಗಳನ್ನು ಖಂಡಿಸುವುದಾಗಿ ತಿಳಿಸಿದರು.

ಪ್ರತಾಪ್ ಸಿಂಹ ಅವರು ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸದಿದ್ದರೆ ಡಿಎಸ್ಎಸ್‌ನ ಎಲ್ಲಾ ಮುಖಂಡರು ಒಗ್ಗೂಡಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಛತ್ರಪ್ಪ ಚಲವಾದಿ ಎಚ್ಚರಿಕೆ ನೀಡಿದರು. ಸಮಾಜದಲ್ಲಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಜವಾಬ್ದಾರಿಯುತ ಹೇಳಿಕೆಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಡಿಎಸ್ಎಸ್ ಯುವ ಮುಖಂಡ ರಾಘವೇಂದ್ರ ಕಾತರಕಿ ಮಾತನಾಡಿ, ಸಂಘಟನೆಯ ಆಶಯ ಮತ್ತು ಹೋರಾಟವನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ದಲಿತರು, ಶೋಷಿತರು ಹಾಗೂ ಸಾಮಾಜಿಕವಾಗಿ ಹಿಂದುಳಿದವರ ಹಕ್ಕುಗಳಿಗಾಗಿ ಡಿಎಸ್ಎಸ್ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದೆ. ಇಂತಹ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಪ್ರತಾಪ್ ಸಿಂಹ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಕ್ಷಮೆಯಾಚನೆ ನಡೆಯದಿದ್ದರೆ ಮುಂದಿನ ಹಂತದಲ್ಲಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಹೋರಾಟ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಡಿಎಸ್ಎಸ್ ಮುಖಂಡರಾದ ಮಲ್ಲಿಕಾರ್ಜುನ್ ಜೆಕ್ಲಿ , ಭೀಮಣ್ಣ ಬೂದುಗುಂಪಿ, ಶಂಕರ್ ಜಕ್ಲಿ ಹಾಗೂ ಮರಿಸ್ವಾಮಿ ಮಂಗಳೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Prajavikshane

Chandru R Bhanapaur

Leave a Reply

error: Content is protected !!