PV NEWS : ಕೊಪ್ಪಳ | ಮೈಸೂರು ದಸರಾ ಉದ್ಘಾಟನೆ ಕುರಿತು ಸುಳ್ಳು ಸುದ್ದಿ: ಪ್ರಕರಣ ದಾಖಲು !!

ಕೊಪ್ಪಳ, ಸೆ.27 : ಮೈಸೂರು ದಸರಾ–2026ರ ಉದ್ಘಾಟನೆಗೆ ಸಂಬಂಧಿಸಿದಂತೆ ಗವಿಸಿದ್ದೇಶ್ವರ ಸ್ವಾಮೀಜಿಯವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಸುದ್ದಿಯ ಹಿನ್ನೆಲೆಯಲ್ಲಿ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
