You are currently viewing PV NEWS : ಸಮಾಜಘಾತಕ ಚಟುವಟಿಕೆಗಳಿಗೆ ಬ್ರೇಕ್! ಕುಕನೂರು ಪಿಎಸ್ಐ ಮೌನೇಶ್ ರಾಠೋಡ್, ಕಾನೂನು ಸುವ್ಯವಸ್ಥೆಗೆ ಆದ್ಯತೆ!

PV NEWS : ಸಮಾಜಘಾತಕ ಚಟುವಟಿಕೆಗಳಿಗೆ ಬ್ರೇಕ್! ಕುಕನೂರು ಪಿಎಸ್ಐ ಮೌನೇಶ್ ರಾಠೋಡ್, ಕಾನೂನು ಸುವ್ಯವಸ್ಥೆಗೆ ಆದ್ಯತೆ!

PV NEWS : ಸಮಾಜಘಾತಕ ಚಟುವಟಿಕೆಗಳಿಗೆ ಬ್ರೇಕ್! ಕುಕನೂರು ಪಿಎಸ್ಐ ಮೌನೇಶ್ ರಾಠೋಡ್, ಕಾನೂನು ಸುವ್ಯವಸ್ಥೆಗೆ ಆದ್ಯತೆ!

ಅಕ್ರಮ, ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ – ಕೋಮು ಸೌಹಾರ್ದತೆ ಕಾಪಾಡಲು ಬದ್ಧ: ಪಿಎಸ್ಐ ಮೌನೇಶ್ ರಾಠೋಡ್!

PV NEWS ಕನ್ನಡ 24×7|

ಕುಕನೂರು, ಅ.02: ಕುಕನೂರು ಪೊಲೀಸ್ ಠಾಣೆಯ ನೂತನ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿರುವ ಮೌನೇಶ್ ರಾಠೋಡ್ ಅವರು ಠಾಣಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಕಾರ್ಯನಿರ್ವಹಿಸುವುದೇ ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವೀಕ್ಷಣೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಠಾಣಾ ವ್ಯಾಪ್ತಿಯಲ್ಲಿ ನಡೆಯಬಹುದಾದ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದರು.

ಅದೇ ರೀತಿ ಪ್ರದೇಶದಲ್ಲಿ ಕೋಮು ಸೌಹಾರ್ದತೆ ಮತ್ತು ಶಾಂತಿ–ಸುವ್ಯವಸ್ಥೆಯನ್ನು ಕಾಪಾಡುವುದು ತಮ್ಮ ಪ್ರಮುಖ ಗುರಿಗಳಲ್ಲೊಂದು. ಎಲ್ಲ ಸಮುದಾಯದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಪರಸ್ಪರ ಸಹಬಾಳ್ವೆ ಹಾಗೂ ಸೌಹಾರ್ದತೆಯ ವಾತಾವರಣ ನಿರ್ಮಿಸಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

“ಸಾರ್ವಜನಿಕರೊಂದಿಗೆ ಸಹಕಾರದ ಮನೋಭಾವದಿಂದ ಕೆಲಸ ಮಾಡುವುದು, ಅವರ ಸಮಸ್ಯೆಗಳನ್ನು ಆಲಿಸುವುದು ಹಾಗೂ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ತೆಗೆದುಕೊಂಡು ಹೋಗಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಮೊದಲ ಆದ್ಯತೆ” ಎಂದು ಪಿಎಸ್ಐ ಮೌನೇಶ್ ರಾಠೋಡ್ ಹೇಳಿದರು.

ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವೆ ಉತ್ತಮ ಸಮನ್ವಯವಿದ್ದಾಗ ಮಾತ್ರ ಅಪರಾಧ ನಿಯಂತ್ರಣ ಹಾಗೂ ಶಾಂತಿ–ಸುವ್ಯವಸ್ಥೆ ಕಾಪಾಡಲು ಸಾಧ್ಯ. ಆದ್ದರಿಂದ ಸಾರ್ವಜನಿಕರು ಯಾವುದೇ ಸಮಸ್ಯೆ, ಅಕ್ರಮ ಚಟುವಟಿಕೆ ಅಥವಾ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.

ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.

Prajavikshane

Chandru R Bhanapaur

Leave a Reply

error: Content is protected !!