PV NEWS : ಯಲಬುರ್ಗಾ | ಬೇವೂರು ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಕಾಳಿಂಗ ಎ. ಅಧಿಕಾರ ಸ್ವೀಕಾರ!
PV NEWS ಕನ್ನಡ 24×7:
ಯಲಬುರ್ಗಾ, ಅ.05 : ತಾಲೂಕಿನ ಬೇವೂರು ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿದ ಪಿಎಸ್ಐ ಕಾಳಿಂಗ ಎ. ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಪಿಎಸ್ಐ ಕಾಳಿಂಗ ಎ. ಅವರು, “ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಈ ಹಿಂದೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಪ್ರಸ್ತುತ ಹಂಪಿ ಪೊಲೀಸ್ ಠಾಣೆಯಿಂದ ಬೇವೂರು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದು, ಇಂದು ಅಧಿಕಾರ ವಹಿಸಿಕೊಂಡಿದ್ದೇನೆ” ಎಂದು ತಿಳಿಸಿದರು.
ಬೇವೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿರಲಿದೆ ಎಂದು ಅವರು ಹೇಳಿದರು.
ಸಾರ್ವಜನಿಕರು ಯಾವುದೇ ಸಮಸ್ಯೆ ಅಥವಾ ದೂರುಗಳಿದ್ದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದ ಅವರು, “ಜನರ ಸುರಕ್ಷತೆ ಹಾಗೂ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ. ಸಾರ್ವಜನಿಕರು ಯಾವುದೇ ಭಯವಿಲ್ಲದೆ ತಮ್ಮ ಸಮಸ್ಯೆಗಳನ್ನು ಪೊಲೀಸರ ಗಮನಕ್ಕೆ ತರಬೇಕು” ಎಂದು ಹೇಳಿದರು.