BIG NEWS : ಕುಕನೂರು | ಚಕ್ರ ಎಸೆತ ಸ್ಪರ್ಧೆ: ಕು. ಸುಷ್ಮಾ ಹೊನ್ನುಂಚಿಗೆ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ!
ಅದ್ಭುತ ಕ್ರೀಡಾ ಸಾಧನೆಯ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿನಿ!
PV NEWS ಕನ್ನಡ 24×7:
ಕುಕನೂರು, ಅ. 06: ಇಲ್ಲಿನ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ಸುಷ್ಮಾ ಹೊನ್ನುಂಚಿ ಅವರು ಜಿಲ್ಲಾಮಟ್ಟದ ಕ್ರೀಡಾಕೂಟದ ಚಕ್ರ ಎಸೆತ (Discus Throw) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತಮ್ಮ ಅತ್ಯುತ್ತಮ ಕ್ರೀಡಾ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ಜಿಲ್ಲಾಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಸುಷ್ಮಾ ಹೊನ್ನುಂಚಿ ಅವರು ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅವರ ಈ ಸಾಧನೆಗೆ ಶಾಲಾ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.
ತಾಲೂಕಿನ ಕಕ್ಕಿಹಳ್ಳಿ ತಾಂಡಾದ ಆನಂದ ಹಾಗೂ ಲಕ್ಷ್ಮಿ ಹೊನ್ನುಂಚಿ ದಂಪತಿಯ ಪುತ್ರಿಯಾದ ಸುಷ್ಮಾ ಆನಂದ ಹೊನ್ನುಂಚಿ ಅವರು ತಮ್ಮ ಅತ್ಯುತ್ತಮ ಕ್ರೀಡಾ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ಜಿಲ್ಲಾಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಮೂಲಕ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅವರ ಈ ಸಾಧನೆಗೆ ಶಾಲಾ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.
ವಿದ್ಯಾರ್ಥಿನಿಯ ಈ ಸಾಧನೆಯನ್ನು ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ, ಶಾಲಾ ಸುಧಾರಣಾ ಸೇವಾ ಸಮಿತಿಯ ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಸರ್ವ ಶಿಕ್ಷಕ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ಮತ್ತಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.