ಮುದಗಲ್ಲ ವರದಿ..
ಮುದಗಲ್ಲ:- ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಸಿಡಿದೆದ್ದ ಇಂಡಿಯಾ’ ಕೂಟ ಎನ್.ಎಸ್. ಬೋಸರಾಜ ಅವರ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ..
ಮುದಗಲ್ಲ:- SIR (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಸಂದರ್ಭದಲ್ಲಿ ಫಾರಂ–7ರ ಮೂಲಕ ನೈಜ ಮತದಾರರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರ ವಿರುದ್ಧ ತಕ್ಷಣವಾಗಿ ರಾಜಿನಾಮೆ ನೀಡಬೇಕು ಎಂದು ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರು ಹಾಗೂ ಮಾಜಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ,
ಇಂದು ಲಿಂಗಸೂಗೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮುದಗಲ್ ಪಟ್ಟಣದಲ್ಲಿ ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್.ಎಸ್. ಬೋಸರಾಜ ಅವರ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಶ್ರೀ ಡಿ.ಎಸ್. ಹೂಲಗೇರಿ, ಮಾನವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹಂಪಯ್ಯ ನಾಯಕ, ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಸನಗೌಡ ತುರವಿಹಾಳ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಸನಗೌಡ ಬಾದರ್ಲಿ ಅವರು ಉಪಸ್ಥಿತರಿದ್ದರು.
ಇದಲ್ಲದೆ, ಲಿಂಗಸೂಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಗೋವಿಂದ ನಾಯಕ, ಮುದಗಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಶಿವಶಂಕರಗೌಡ, ಹಟ್ಟಿ ನಗರ ಘಟಕ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಅಹ್ಮದ್ ಬಾಬಾ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮುಚ್ಚೂಣಿ ವಿಭಾಗದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪುರಸಭಾ ಸದಸ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವರದಿ :-ಮಂಜುನಾಥ ಕುಂಬಾರ