You are currently viewing PV NEWS | ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲಿಸಿದ ಸಚಿವ ಬಸವರಾಜ ರಾಯರೆಡ್ಡಿ! 

PV NEWS | ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲಿಸಿದ ಸಚಿವ ಬಸವರಾಜ ರಾಯರೆಡ್ಡಿ! 

PV NEWS | ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲಿಸಿದ ಸಚಿವ ಬಸವರಾಜ ರಾಯರೆಡ್ಡಿ! 

ವಿವಿಗಳ ವಿಭಜನೆಯ ನಂತರದ ಮೂಲಸೌಕರ್ಯ, ಕಟ್ಟಡ ಕಾಮಗಾರಿ, ಸಿಬ್ಬಂದಿ, ವಿದ್ಯಾರ್ಥಿಗಳ ದಾಖಲಾತಿ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ಸಮಗ್ರ ಅವಲೋಕನ

ಬೆಂಗಳೂರು, ಅ. 10 : ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವುದು ಹಾಗೂ ವಿಶ್ವವಿದ್ಯಾಲಯಗಳ ಸರ್ವಾಂಗೀಣ ಪ್ರಗತಿಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯ, ಧಾರವಾಡ; ಹಾವೇರಿ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಗೋಟಗೋಡಿ ಇವುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ವಿಶ್ವವಿದ್ಯಾಲಯಗಳ ವಿಭಜನೆಯ ನಂತರದ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ಕಾಮಗಾರಿಗಳ ಪ್ರಗತಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ವಿವರ, ವಿದ್ಯಾರ್ಥಿಗಳ ದಾಖಲಾತಿ ಮತ್ತು ಆರ್ಥಿಕ ಸ್ಥಿತಿಗತಿ ಕುರಿತು ಸಮಗ್ರ ಮಾಹಿತಿ ಪಡೆಯಲಾಯಿತು.

ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದರೊಂದಿಗೆ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ, ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎ.ಎಂ. ಖಾನ್, ಹಾವೇರಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸುರೇಶ್ ಜಂಗಮಶೆಟ್ಟಿ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PV NEWS | ಬೆಂಗಳೂರು.

Prajavikshane

Chandru R Bhanapaur

Leave a Reply

error: Content is protected !!