ಮುದಗಲ್ಲ ವರದಿ..
ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಶಿಕ್ಷಕರಿಂದ ಉತ್ಸಾಹಭರಿತ ಮತದಾನ..
ಮುದಗಲ್ಲ : ವಿಧಾನ ಪರಿಷತ್ ಪ್ರವೇಶಕ್ಕಾಗಿ ನಡೆಯುತ್ತಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರು ಶುಕ್ರವಾರ ಬೆಳಗ್ಗೆಯಿಂದಲೇ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಶುಕ್ರವಾರ ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು,

ಪಟ್ಟಣದಲ್ಲಿ ಪುರಸಭೆ ಯಲ್ಲಿ ಮತಗಟ್ಟೆಗಳಲ್ಲಿ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಮತಗಟ್ಟೆಗಳಲ್ಲಿ ಬೆಳಗ್ಗೆಯಿಂದಲೇ ಮತದಾನ ಚಟುವಟಿಕೆಗಳು ಗರಿಗೆದರಿದ್ದವು.

ಶಿಕ್ಷಕರು ಅಗತ್ಯ ಗುರುತಿನ ಚೀಟಿಗಳನ್ನು ಹಾಜರುಪಡಿಸಿ ಮತದಾನದಲ್ಲಿ ಭಾಗವಹಿಸಿದರು. ಇದೇ ವೇಳೆ, ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಶಿಕ್ಷಕರು ವಿಶೇಷ ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿ ಗಮನ ಸೆಳೆದರು.

ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಹಾಗೂ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ನಮೋಶಿ ಸೇರಿದಂತೆ ಇತರ ಅಭ್ಯರ್ಥಿಗಳು ಮತಗಟ್ಟೆಗಳ ಹೊರ ಭಾಗದಲ್ಲಿರುವ ಕೇಂದ್ರಗಳಿಗೆ ಭೇಟಿ ನೀಡಿದ ಕಾಂಗ್ರೆಸ್ ಮಾಜಿ ಶಾಸಕರಾದ ಡಿ. ಎಸ್ ಹುಲಿಗೇರಿ ಕಾಂಗ್ರೆಸ್ ಪ್ರಮುಖ ಮುಖಂಡರು ಹಾಗೂ ಬಿಜೆಪಿ ಮುಖಂಡರು ಚುನಾವಣಾ ಪ್ರಕ್ರಿಯೆಯ ಕುರಿತು ಪರಿಶೀಲನೆ ನಡೆಸಿದರು.
ಮುದಗಲ್ಲ ಒಂದು ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 134 ಪುರುಷರು ಹಾಗೂ 53
ಮಹಿಳೆಯರು ಸೇರಿದಂತೆ ಒಟ್ಟು 187 ಮತದಾರರು ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿದ್ದಾರೆ.
ಶುಕ್ರವಾರ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
ವರದಿ :ಮಂಜುನಾಥ ಕುಂಬಾರ