You are currently viewing PV NEWS : ಕುಕನೂರು | ಕಿತ್ತೂರು ರಾಣಿ ಚೆನ್ನಮ್ಮನ ಆದರ್ಶಗಳು ಯುವಜನತೆಗೆ ಪ್ರೇರಣೆ: EO ಬೆಟದಪ್ಪ ಮಾಳೆಕೊಪ್ಪ!

PV NEWS : ಕುಕನೂರು | ಕಿತ್ತೂರು ರಾಣಿ ಚೆನ್ನಮ್ಮನ ಆದರ್ಶಗಳು ಯುವಜನತೆಗೆ ಪ್ರೇರಣೆ: EO ಬೆಟದಪ್ಪ ಮಾಳೆಕೊಪ್ಪ!

PV NEWS : ಕುಕನೂರು | ಕಿತ್ತೂರು ರಾಣಿ ಚೆನ್ನಮ್ಮನ ಆದರ್ಶಗಳು ಯುವಜನತೆಗೆ ಪ್ರೇರಣೆ: EO ಬೆಟದಪ್ಪ ಮಾಳೆಕೊಪ್ಪ!

PV NEWS KANNADA 24*7 : 

ಕುಕನೂರು,ಅ.23  : ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಶೌರ್ಯ ಮತ್ತು ದೇಶಪ್ರೇಮದ ಆದರ್ಶಗಳನ್ನು ನಾವೆಲ್ಲರೂ ಸ್ಮರಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬೆಟದಪ್ಪ ಮಾಳೆಕೊಪ್ಪ ಹೇಳಿದರು.

ಶುಕ್ರವಾರ (ಅ.23 ರಂದು) ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚೆನ್ನಮ್ಮನ ಜೀವನಾದರ್ಶಗಳು ಇಂದಿನ ಯುವಜನತೆಗೆ ಸ್ಫೂರ್ತಿಯಾಗಿವೆ. ಅವರ ಧೈರ್ಯ, ಸ್ವಾಭಿಮಾನ ಮತ್ತು ತ್ಯಾಗದ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಆನಂದ ಗರೂರ, ಲೆಕ್ಕ ಸಹಾಯಕ ಸದ್ದಾಮ್ ಹುಸೇನ್, ವಿ.ಬಿ.ಜಿ. ರಾಮ್ ಜಿ ಹಾಗೂ ಎನ್‌ಆರ್‌ಎಲ್‌ಎಂ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.

Prajavikshane

Chandru R Bhanapaur

Leave a Reply

error: Content is protected !!