You are currently viewing PV NEWS | ಕೊಳೂರು ಗ್ರಾಮದ ಬಳಿ ಅಕ್ರಮ ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ!

PV NEWS | ಕೊಳೂರು ಗ್ರಾಮದ ಬಳಿ ಅಕ್ರಮ ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ!

PV NEWS | ಕೊಳೂರು ಗ್ರಾಮದ ಬಳಿ ಅಕ್ರಮ ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ!

11 ಮಂದಿ ವಶಕ್ಕೆ; ₹88,350 ನಗದು, 19 ಬೈಕ್‌ಗಳು ಹಾಗೂ 11 ಮೊಬೈಲ್‌ಗಳು ಜಪ್ತಿ..!

PV NEWS ಕನ್ನಡ 24×7 |

ಕೊಪ್ಪಳ, ಅ.30: ಜಿಲ್ಲೆಯ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳೂರು ಗ್ರಾಮದ ಸೀಮೆಯಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಅ.29ರಂದು ಸಂಜೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಕುರಿತು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ 11 ಮಂದಿಯನ್ನು ವಶಕ್ಕೆ ಪಡೆದು, ಸ್ಥಳದಲ್ಲಿದ್ದ ₹88,350 ನಗದು ಹಣ, 11 ಮೊಬೈಲ್ ಫೋನ್‌ಗಳು, 19 ಮೋಟಾರ್ ಸೈಕಲ್‌ಗಳು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 219/2026ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಎಸ್ ಪಿ ಸಾಹಿಲ್ ಬಾಗ್ಲಾ
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.

ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಸಂಘಟಿತ ಅಪರಾಧಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ವಿಶೇಷ ನಿಗಾ ವಹಿಸಿದೆ. ಸಾರ್ವಜನಿಕರು ಇಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಹಾಗೂ ಅವುಗಳಿಗೆ ಯಾವುದೇ ರೀತಿಯ ಸಹಕಾರ ನೀಡದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಸಾಹಿಲ್ ಬಾಗ್ಲಾ ನೀಡಿದ್ದಾರೆ. ಅಕ್ರಮ ಚಟುವಟಿಕೆಗಳ ವಿರುದ್ಧ ನಿರಂತರ ದಾಳಿ ನಡೆಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Prajavikshane

Chandru R Bhanapaur

Leave a Reply

error: Content is protected !!