You are currently viewing BIG NEWS | ಕುಕನೂರು | ಶಶಿಲ್ ನಮೋಶಿ ಗೆಲುವಿನ ಸಂಭ್ರಮ; ಕಾರ್ಯಕರ್ತರಿಗೆ ಅಭಿನಂದನೆ, ಕೃತಜ್ಞತೆ ಸಲ್ಲಿಸಿದ ಎಂಎಲ್‌ಸಿ!

BIG NEWS | ಕುಕನೂರು | ಶಶಿಲ್ ನಮೋಶಿ ಗೆಲುವಿನ ಸಂಭ್ರಮ; ಕಾರ್ಯಕರ್ತರಿಗೆ ಅಭಿನಂದನೆ, ಕೃತಜ್ಞತೆ ಸಲ್ಲಿಸಿದ ಎಂಎಲ್‌ಸಿ!

BIG NEWS | ಕುಕನೂರು | ಶಶಿಲ್ ನಮೋಶಿ ಗೆಲುವಿನ ಸಂಭ್ರಮ; ಕಾರ್ಯಕರ್ತರಿಗೆ ಅಭಿನಂದನೆ, ಕೃತಜ್ಞತೆ ಸಲ್ಲಿಸಿದ ಎಂಎಲ್‌ಸಿ!

ಮಾಜಿ ಸಚಿವ ಹಾಲಪ್ಪ ಆಚಾರ್ ನೇತೃತ್ವದಲ್ಲಿ ಮಸಾಬಹಂಚಿನಾಳದ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಮಾರಂಭ; ಪಕ್ಷದ ಮುಖಂಡರು, ಕಾರ್ಯಕರ್ತರ ಸಂಭ್ರಮಾಚರಣೆ!

PV NEWS ಕನ್ನಡ 24×7

ಕುಕನೂರು, ನ. 02: ಈಶಾನ್ಯ ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಭರ್ಜರಿ ಗೆಲುವು ಸಾಧಿಸಿದ ಶಶಿಲ್ ನಮೋಶಿ ಅವರ ಗೆಲುವಿನ ಹಿನ್ನೆಲೆಯಲ್ಲಿ ತಾಲೂಕಿನ ಮಸಾಬಹಂಚಿನಾಳ ಗ್ರಾಮದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಗೆ ಅಭಿನಂದನೆ ಹಾಗೂ ಧನ್ಯವಾದ ಸಮರ್ಪಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಅಭಿನಂದಿಸಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಶಶಿಲ್ ನಮೋಶಿ ಅವರ ಗೆಲುವು ಪಕ್ಷದ ಸಂಘಟಿತ ಪ್ರಯತ್ನ ಹಾಗೂ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಗೌರವವಾಗಿದೆ. ಮುಂದಿನ ದಿನಗಳಲ್ಲಿಯೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ರಾಜೂರು, ಯಲಬುರ್ಗಾ ಮಂಡಲ ಅಧ್ಯಕ್ಷ ಮಾರುತಿ ಗಾವರಾಳ, ಬಸಲಿಂಗಪ್ಪ ಬೂತೆ, ಶಿವಕುಮಾರ್ ನಾಗಲಾಪುರಮಠ, ಈರಣ್ಣ ಹುಬ್ಬಳ್ಳಿ, ಶರಣಪ್ಪ ಬಣ್ಣದಭಾವಿ, ನಾಗರಾಜ ವೆಂಕಟಾಪುರ, ಮಂಜುನಾಥ ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

“ಶಶಿಲ್ ನಮೋಶಿ ಅವರ ಗೆಲುವು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಪರಿಶ್ರಮದ ಫಲವಾಗಿದೆ. ಚುನಾವಣೆಯಲ್ಲಿ ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ಪಕ್ಷದ ಸಂಘಟನೆ ಬಲಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಶಶಿಲ್ ನಮೋಶಿ ಅವರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಆಶೋತ್ತರಗಳಿಗೆ ಧ್ವನಿಯಾಗಲಿ ಎಂಬುದು ನಮ್ಮ ಆಶಯ”

– ಹಾಲಪ್ಪ ಆಚಾರ್, ಮಾಜಿ ಸಚಿವರು, ಯಲಬುರ್ಗಾ ವಿಧಾನಸಭಾ ಕ್ಷೇತ್ರ.

 

Prajavikshane

Chandru R Bhanapaur

Leave a Reply

error: Content is protected !!