You are currently viewing PV NEWS : ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಭಾರೀ ಹೆಚ್ಚಳ! : ಡೀಸೆಲ್ ಬೆಲೆ, ಸಿಬ್ಬಂದಿ ವೆಚ್ಚದ ಹೊರೆ; ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ! 

PV NEWS : ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಭಾರೀ ಹೆಚ್ಚಳ! : ಡೀಸೆಲ್ ಬೆಲೆ, ಸಿಬ್ಬಂದಿ ವೆಚ್ಚದ ಹೊರೆ; ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ! 

PV NEWS : ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಭಾರೀ ಹೆಚ್ಚಳ! : ಡೀಸೆಲ್ ಬೆಲೆ, ಸಿಬ್ಬಂದಿ ವೆಚ್ಚದ ಹೊರೆ; ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ! 

PV NEWS ಕನ್ನಡ 24×7

ಬೆಂಗಳೂರು, ನ. 5: ರಾಜ್ಯದ ಸಾರ್ವಜನಿಕ ಸಾರಿಗೆ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾಸಂ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕಕರಸಾನಿ) ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಪರಿಷ್ಕೃತ ದರವು ನವೆಂಬರ್ 4 ಮತ್ತು 5ರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

ಡೀಸೆಲ್ ಬೆಲೆ ಏರಿಕೆ, ಸಿಬ್ಬಂದಿ ವೇತನ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಳದಿಂದ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಿವೆ. ಈ ಹಿನ್ನೆಲೆಯಲ್ಲಿ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಸಾರಿಗೆ ಸಂಸ್ಥೆಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿವೆ.

ನಿಗಮಗಳ ಒಟ್ಟು ಕಾರ್ಯಾಚರಣಾ ವೆಚ್ಚದಲ್ಲಿ ಸುಮಾರು ಶೇ.80ರಷ್ಟು ಹಣ ಡೀಸೆಲ್ ಮತ್ತು ಸಿಬ್ಬಂದಿ ವೆಚ್ಚಕ್ಕೆ ವ್ಯಯವಾಗುತ್ತಿದೆ. ಪ್ರಸ್ತುತ ಡೀಸೆಲ್ ದರ ಪ್ರತಿ ಲೀಟರ್‌ಗೆ ಸರಾಸರಿ ₹98.13 ತಲುಪಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರತಿ ಲೀಟರ್‌ಗೆ ₹10.47ರಷ್ಟು ಏರಿಕೆಯಾಗಿದೆ. ನಾಲ್ಕೂ ನಿಗಮಗಳು ಪ್ರತಿದಿನ ಸುಮಾರು ₹15.60 ಕೋಟಿ ಹಾಗೂ ವಾರ್ಷಿಕವಾಗಿ ₹5,694 ಕೋಟಿ ಇಂಧನಕ್ಕಾಗಿ ವೆಚ್ಚ ಮಾಡುತ್ತಿವೆ.

ಇನ್ನು ನಾಲ್ಕೂ ಸಾರಿಗೆ ನಿಗಮಗಳ ಸಂಚಿತ ನಷ್ಟ ಸುಮಾರು ₹10,200 ಕೋಟಿಗೆ ತಲುಪಿದೆ. ಇಂಧನ ಪೂರೈಕೆ ಬಾಕಿ ₹1,111.88 ಕೋಟಿ ಸೇರಿದಂತೆ ಒಟ್ಟು ಬಾಕಿ ಮತ್ತು ಆರ್ಥಿಕ ಹೊಣೆಗಾರಿಕೆಗಳು ₹9,912.10 ಕೋಟಿಗಳಷ್ಟಿವೆ. ಇದರಲ್ಲಿ ನೌಕರರ ಭವಿಷ್ಯ ನಿಧಿ, ನಿವೃತ್ತಿ ವೇತನ ಹಾಗೂ ಬಾಕಿ ವೇತನದ ಮೊತ್ತವೂ ಸೇರಿದೆ.

ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ಸಮಿತಿಯ ಶಿಫಾರಸಿನ ಮೇರೆಗೆ ರಚಿಸಲಾದ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯ ವರದಿಯ ಆಧಾರದಲ್ಲಿ ಈ ದರ ಪರಿಷ್ಕರಣೆ ಕೈಗೊಳ್ಳಲಾಗಿದೆ ಎಂದು ಸಾರಿಗೆ ನಿಗಮಗಳು ತಿಳಿಸಿವೆ.

ದರ ಏರಿಕೆಯಿಂದ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಸುಧಾರಿಸುವ ನಿರೀಕ್ಷೆಯಿದ್ದರೂ, ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಪ್ರಯಾಣಿಕರ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ.

Prajavikshane

Chandru R Bhanapaur

Leave a Reply

error: Content is protected !!