BIG NEWS : ಕುಕನೂರು | ದೀಪಾವಳಿ ಹೆಸರಿನಲ್ಲಿ ಇಸ್ಪೀಟ್ ಜೂಜಾಟಕ್ಕೆ ಅವಕಾಶವಿಲ್ಲ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: PSI ಮೌನೇಶ ರಾಠೋಡ

PV NEWS ಕನ್ನಡ 24×7|
ಕುಕನೂರು, ನ. 6: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ‘ಲಕ್ಷ್ಮಿ ಪೂಜೆ’ ಹೆಸರಿನಲ್ಲಿ ಇಸ್ಪೀಟ್ ಜೂಜಾಟ ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹಬ್ಬದ ನೆಪದಲ್ಲಿ ಜೂಜಾಟದಲ್ಲಿ ತೊಡಗುವವರು ಹಾಗೂ ಇಂತಹ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕುಕನೂರು ಪೊಲೀಸ್ ಠಾಣೆಯ ಪಿಎಸ್ಐ ಮೌನೇಶ ರಾಠೋಡ ಎಚ್ಚರಿಕೆ ನೀಡಿದ್ದಾರೆ.
ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಬೇಕು. ‘ಲಕ್ಷ್ಮಿ ಪೂಜೆ’ ಹೆಸರಿನಲ್ಲಿ ಹಣದ ಪಣವಿಟ್ಟು ಇಸ್ಪೀಟ್ ಆಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕರು ಇಂತಹ ಚಟುವಟಿಕೆಗಳಿಂದ ದೂರವಿದ್ದು, ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹಸಿರು ಪಟಾಕಿಗಳನ್ನು ಬಳಸಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಅಥವಾ ಅನುಮಾನಗಳಿದ್ದಲ್ಲಿ ಕುಕನೂರು ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು 9480803750 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
“ದೀಪಾವಳಿ ಹಬ್ಬದ ಹೆಸರಿನಲ್ಲಿ ‘ಲಕ್ಷ್ಮಿ ಪೂಜೆ’ ನೆಪವೊಡ್ಡಿ ಇಸ್ಪೀಟ್ ಜೂಜಾಟ ಆಡುವುದಕ್ಕೆ ಯಾವುದೇ ಅವಕಾಶವಿಲ್ಲ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಪರಿಸರದ ಹಿತದೃಷ್ಟಿಯಿಂದ ಹಸಿರು ಪಟಾಕಿಗಳನ್ನು ಬಳಸುವ ಮೂಲಕ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು.”
— ಮೌನೇಶ ರಾಠೋಡ್, ಪಿಎಸ್ಐ, ಕುಕನೂರು ಪೊಲೀಸ್ ಠಾಣೆ.
