You are currently viewing FLASH NEWS : ಕೊಪ್ಪಳ ಬಸ್ ನಿಲ್ದಾಣದಲ್ಲಿ ಹೈಡ್ರಾಮಾ! : ಡಿಎಸ್ಎಸ್ ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ, ಅವಾಚ್ಯ ನಿಂದನೆ ಆರೋಪ; ಮಹಿಳಾ ಕಂಟ್ರೋಲರ್ ವಿರುದ್ಧ ಎಫ್‌ಐಆರ್ ದಾಖಲು!

FLASH NEWS : ಕೊಪ್ಪಳ ಬಸ್ ನಿಲ್ದಾಣದಲ್ಲಿ ಹೈಡ್ರಾಮಾ! : ಡಿಎಸ್ಎಸ್ ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ, ಅವಾಚ್ಯ ನಿಂದನೆ ಆರೋಪ; ಮಹಿಳಾ ಕಂಟ್ರೋಲರ್ ವಿರುದ್ಧ ಎಫ್‌ಐಆರ್ ದಾಖಲು!

FLASH NEWS : ಕೊಪ್ಪಳ ಬಸ್ ನಿಲ್ದಾಣದಲ್ಲಿ ಹೈಡ್ರಾಮಾ! : ಡಿಎಸ್ಎಸ್ ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ, ಅವಾಚ್ಯ ನಿಂದನೆ ಆರೋಪ; ಮಹಿಳಾ ಕಂಟ್ರೋಲರ್ ವಿರುದ್ಧ ಎಫ್‌ಐಆರ್ ದಾಖಲು!

PV NEWS ಕನ್ನಡ 24×7

ಕೊಪ್ಪಳ, ನ 19 : ಪಾರ್ಸೆಲ್ ವಿಚಾರವಾಗಿ ಉಂಟಾದ ವಾಗ್ವಾದ ವಿಕೋಪಕ್ಕೆ ತಿರುಗಿ, ಡಿಎಸ್ಎಸ್ ಜಿಲ್ಲಾಧ್ಯಕ್ಷರ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಮಹಿಳಾ ಬಸ್ ಕಂಟ್ರೋಲರ್ ಅನ್ನಪೂರ್ಣ ವಿರುದ್ಧ ನ.18 ರಂದು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕುಕನೂರು ತಾಲೂಕಿನ ಬೆಣಕಲ್ ಗ್ರಾಮದ ನಿಂಗಪ್ಪ ಜಿ.ಎಸ್. (32) ಹಲ್ಲೆಗೊಳಗಾದವರು. ಇವರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ, ಕಾದ್ರೊಳ್ಳಿ ಬಣ) ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಸುಮಾರು 9.30ಕ್ಕೆ ಪಾರ್ಸೆಲ್ ವಿಚಾರವಾಗಿ ಬಸ್ ಕಂಟ್ರೋಲರ್ ಅನ್ನಪೂರ್ಣ ಅವರನ್ನು ಸಂಪರ್ಕಿಸಿದಾಗ, ಬಸ್ ಕುರಿತು ಮಾಹಿತಿ ಕೇಳಿದ ನಿಂಗಪ್ಪ ಅವರೊಂದಿಗೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಳಿಕ ಕಚೇರಿಯಿಂದ ಹೊರಬಂದ ಕಂಟ್ರೋಲರ್, ನಿಂಗಪ್ಪ ಅವರ ಅಂಗಿ ಹಿಡಿದು ಎಳೆದಾಡಿ ಕೈಗಳಿಂದ ಹಲ್ಲೆ ನಡೆಸಿ, ಸಾರ್ವಜನಿಕರ ಎದುರೇ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯ ವೇಳೆ ಬಸ್ ನಿಲ್ದಾಣದಲ್ಲಿ ಹಲವು ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಘಟನೆ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಸಿತು.

ಈ ಸಂಬಂಧ ನಿಂಗಪ್ಪ ಅವರು ನೀಡಿದ ದೂರಿನ ಮೇರೆಗೆ ಕೊಪ್ಪಳ ನಗರ ಪೊಲೀಸರು BNS ಕಲಂ 115(2), 126(2), 352ರ ಅಡಿಯಲ್ಲಿ ಅಪರಾಧ ಸಂಖ್ಯೆ 174/2026 ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಡಿಎಸ್ಎಸ್‌ನಿಂದ ಪ್ರತಿಭಟನೆಯ ಎಚ್ಚರಿಕೆ!

ಜಿಲ್ಲಾಧ್ಯಕ್ಷ ನಿಂಗಪ್ಪ ಬೆಣಕಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಮಹಿಳಾ ಕಂಟ್ರೋಲರ್ ಅನ್ನಪೂರ್ಣ ಅವರನ್ನು ಕೂಡಲೇ ಬಂಧಿಸಿ, ಸೇವೆಯಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಕೊಪ್ಪಳ ಡಿಪೋ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಡಿಎಸ್ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರಿಯಪ್ಪ ಮಣ್ಣಿನವರ ಎಚ್ಚರಿಕೆ ನೀಡಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!