Post Views: 208
ಮುದಗಲ್ಲ ವರದಿ..
ಮುದಗಲ್ಲ:- ನ. 24ರಂದು ಬಿಜೆಪಿ ನೂತನ ಪದಾಧಿಕಾರಿ ಗಳ ಪದಗ್ರಹಣ..

ಮುದಗಲ್: ಬಿಜೆಪಿ ಮುದಗಲ್ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನ.24ರ ಮಂಗಳವಾರ ಪಟ್ಟಣದ ಮಾಜಿ ಶಾಸಕ ಲೆಕ್ಕಿಹಾಳ ದೊಡ್ಡನಗೌಡ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಡಾ. ಮಂಜುನಾಥ ಎಸ್. ಗುಡಿಹಾಳ (ಪಿಕಳಿಹಾಳ) ತಿಳಿಸಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಲಿಂಗಸುಗೂರು ಶಾಸಕ ಮಾನಪ್ಪ ಡಿ. ವಜ್ಜಲ್, ಕುಷ್ಟಗಿ ಶಾಸಕ ದೊಡ್ಡನಗೌಡ ಕೊರಡಕೇರಿ, ಮಾಜಿ ಶಾಸಕರಾದ ಲೆಕ್ಕಿಹಾಳ ದೊಡ್ಡನಗೌಡ, ಪ್ರತಾಪಗೌಡ ಪಾಟೀಲ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಮುದಗಲ್ ಶಕ್ತಿ ಕೇಂದ್ರದ ಪದಾಧಿಕಾರಿಗಳು, ಮಹಿಳಾ ಮೋರ್ಚಾ, ಯುವ ಮೋರ್ಚಾ, ಹಿಂದುಳಿದ ವರ್ಗಗಳ ಮೋರ್ಚಾ, ಪರಿಶಿಷ್ಟ ಜಾತಿ ಮೋರ್ಚಾ ಸೇರಿದಂತೆ ವಿವಿಧ ಘಟಕಗಳಿಗೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಂಡಲದ ಇತರ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ನೂತನ ಪದಾಧಿಕಾರಿಗಳು ಪಕ್ಷದ ಸಂಘಟನೆ ಬಲಪಡಿಸಲು ಶ್ರಮಿಸಬೇಕು. ಪದಗ್ರಹಣ ಸಮಾರಂಭಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೇಮಂತ ಶೆಟ್ಟಿ, ಉದಯಕುಮಾರ ಕಮ್ಮಾರ, ಮಲ್ಲಪ್ಪ ಮಾಟೂರ, ರವಿಕುಮಾರ ಕಟ್ಟಿಮನಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು
ವರದಿ :-ಮಂಜುನಾಥ ಕುಂಬಾರ
.