ವಿದ್ಯುತ್ ಬಿಲ್ ಹೆಚ್ಚಳ ಮಾಡಿದ್ದು ಕಾಂಗ್ರೆಸ್ ಸರ್ಕಾರ ಅಲ್ಲ : ಶಾಸಕ ರಾಯರಡ್ಡಿ

You are currently viewing ವಿದ್ಯುತ್ ಬಿಲ್ ಹೆಚ್ಚಳ ಮಾಡಿದ್ದು ಕಾಂಗ್ರೆಸ್ ಸರ್ಕಾರ ಅಲ್ಲ : ಶಾಸಕ ರಾಯರಡ್ಡಿ

ಕುಕನೂರು : ವಿದ್ಯುತ್ ಬಿಲ್ ಹೆಚ್ಚಳ ಮಾಡಿದ್ದು ಕಾಂಗ್ರೆಸ್ ಸರ್ಕಾರ ಅಲ್ಲ, ಹಿಂದಿನ ಸರ್ಕಾರ ಇದ್ದಾಗಲೇ ಹೆಚ್ಚಳ ಮಾಡಿದ್ದಾರೆ ಬೇಕಿದ್ದರೆ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಿರಿ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಕುಕನೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ರವಿವಾರ ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಹಿಳೆಯರಿಂದಲೇ ಕಾರ್ಯಕ್ರಮದ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯ ಪೂರ್ವದಲ್ಲಿ ನೀಡಿದ ಆಶ್ವಾಸನೆಗಳನ್ನು ಜಾರಿಗೆ ತರಲಾಗುತ್ತಿದ್ದೆ.

ಪ್ರಣಾಳಿಕೆಯಲ್ಲಿನ ೫ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಇಂದು ಪ್ರಾರಂಭವಾಗುತ್ತಿದ್ದೆ. ಇದರಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಇಂದಿನಿAದ ಉಚಿತವಾಗಿರಲಿದೆ. ಈ ಯೋಜನೆಯಲ್ಲಿ ಪ್ರತಿದಿನ ಕುಕನೂರು ಹಾಗೂ ಯಲಬುರ್ಗಾ ತಾಲೂಕಿನ ೧೩೦೦೦ ಸಾವಿರ ಜನ ಇದರ ಪ್ರಯೋಜನ ಪಡೆಯಲಿದ್ದಾರೆ. ಅಲ್ಲದೇ ಇನ್ನು ಬಾಕಿ ಉಳಿತ ಯೋಜನೆಗಳು ಶೀಘ್ರದಲ್ಲಿಯೇ ಜಾರಿಯಾಗಲಿವೆ ಎಂದು ಅವರು ಕಾಂಗ್ರೆಸ್ ಸರ್ಕಾರ ಬಂದ ಮೇಲೆ ವಿದ್ಯುತ್ ಬಿಲ್ ಹೆಚ್ಚಳವಾಗಿದೆ ಎಂದು ಹೇಳಲಾಗುತ್ತಿದ್ದೆ. ಆದರೆ ವಿದ್ಯುತ್ ಬಿಲ್ ಹೆಚ್ಚಳ ಮಾಡಿದ್ದು ಕಾಂಗ್ರೆಸ್ ಸರ್ಕಾರ ಅಲ್ಲ, ಅದು ಹಿಂದಿನ ಸರ್ಕಾರದಲ್ಲಿಯೇ ಹೆಚ್ಚಳವಾಗಿದ್ದು ಚುನಾವಣೆಯ ಹಿನ್ನಲೇಯಲ್ಲಿ ಅದನ್ನು ತಡೆಹಿಡಿಯಲಾಗಿತ್ತು. ಇದೀಗ ಹೊಸ ಸರ್ಕಾರ ರಚನೆಯಾದ ಮೇಲೆ ಹಿಂದಿನ ಸರ್ಕಾರದ ಆದೇಶದಂತೆ ವಿದ್ಯುತ್ ದರವನ್ನು ವಿದ್ಯುತ್ ನಿಗಮಗಳು ಹೆಚ್ಚಳ ಮಾಡಿದ್ದಾವೆ. ಹೆಚ್ಚಿನ ಮಾಹಿತಿ ಬೇಕಿದ್ದರೆ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಯಲಬುರ್ಗಾ ತಹಶೀಲ್ದಾರ್ ವಿಠ್ಠಲ್ ಚೌಗಲೆ, ಕುಕನೂರು ತಹಶೀಲ್ದಾರ್ ನೀಲಪ್ರಭಾ ಬಬಲದ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರಕಾಶ ಬಾಗಲೆ, ಸಂಚಾರ ನಿಯಂತ್ರಕ ಪ್ರಕಾಶ ಬಂಡಿಹಾಳ, ಹಾಗೂ ಪ್ರಮುಖರಾದ ಬಸವರಾಜ ಉಳ್ಳಾಗಡ್ಡಿ, ಕಾಸೀಂಸಾಬ ತಳಕಲ್, ಸಿದ್ದಯ್ಯ ಕಳ್ಳಿಮಠ, ಡಾ.ಮಲ್ಲಿಕಾರ್ಜುನ್ ಬಿನ್ನಾಳ, ವೀರಯ್ಯ ತೋಂಟದಾರ್ಯಮಠ, ಮಂಜುನಾಥ ಕಡೆಮನಿ,ಹನಮೇಶ ಕಡೆಮನಿ, ಈರಪ್ಪ ಕುಡಗುಂಟಿ, ರೈಮಾನಸಾಬ ಮಾಕಪ್ಪನವರ, ಸಾರಿಗೆ ಇಲಾಖೆಯ ಸಿಬ್ಬಂದಿ ವರ್ಗ, ಅಧಿಕಾರಿಗಳು ಹಾಗೂ ಇತರರಿದ್ದರು.

Leave a Reply

error: Content is protected !!