ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋದಿ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮವು ಜೂನ್ 12ರಂದು ಬೆಳ್ಳಿಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಗೌರವಾನ್ವಿತ ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬನ್ನಿಕಟ್ಟಿ ಹನುಮಂತಪ್ಪ ಆರ್ ಅವರು ಉದ್ಘಾಟಿಸುವರು. ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಎಸ್ ವಂಟಗೋಡಿ, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಹಾಗೂ ತ್ವರಿತಗತಿ ವಿಶೇಷ ಪೋಕ್ಸೋ ನ್ಯಾಯಾಲಯ-1ರ ನ್ಯಾಯಾಧೀಶರಾದ ಕುಮಾರ ಡಿ.ಕೆ.,ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್, ಸಿಜೆಎಂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಲ್.ಜೆ ಭವಾನಿ, ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹರೀಶ್ ಕುಮಾರ ಎಮ್., ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಆದಿತ್ಯಾ ಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಕರಾದ ಮುತ್ತು ರಡ್ಡೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾವತಿ ಜೆ., ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಸುಧಾ ಗರಗ, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಸಂಯೋಜಕರಾದ ಹರೀಶ ಜೋಗಿ, ಜಿಲ್ಲಾ ವಕೀಲರ ಸಂಘ ಅಧ್ಯಕ್ಷರಾದ ಎ.ವಿ.ಕಣವಿ, ಸರಕಾರಿ ವಕೀಲರಾದ ರಾಜಶೇಖರ ವಿ.ಗಣವಾರಿ, ಕೊಪ್ಪಳ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ನಿಲೋಫರ್ ರಾಂಪುರಿ ಅವರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ವೃತ್ತ ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ತಳವಾರ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ ಅವರು ಉಪಸ್ಥಿತರಿರುವರು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಪ್ರಕಟಣೆ ತಿಳಿಸಿದೆ.