ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಯಲ್ಲಿ ಉಚಿತ 10 ಕೆಜಿ ಅಕ್ಕಿ ನಿರೀಕ್ಷೆಯಲ್ಲಿದ್ದ ಪಡಿತರ ಚೀಟಿದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಲಿದೆ ಎನ್ನಲಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಉಚಿತ ಅಕ್ಕಿ ಜುಲೈನಲ್ಲಿ ಜಾರಿಯಾಗುವುದು ಅನುಮಾನ ಎನ್ನಲಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಕೊಡುವುದು ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಎಂದು ತಿಳಿದಿದೆ. ಈ ಬಗ್ಗೆ 10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ ಆದರೆ ಸ್ವಲ್ಪ ತಡವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಕ್ಕೆ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಕೊಡಲು ಕೇಂದ್ರ ಆಹಾರ ನಿಗಮ ನಿರಾಕರಿಸಿದ್ದರೂ ಕೂಡ ನಮ್ಮ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕೇಂದ್ರ ಆಹಾರ ಸರಬರಾಜು ಸಚಿವರನ್ನು ಭೇಟಿಯಾಗಿ ಅಕ್ಕಿ ಖರೀದಿಗೆ ಅನುಮತಿ ನೀಡುವಂತೆ ಮನವಿ ಮಾಡಲಿದ್ದಾರೆ. ಹೇಗಾದರೂ ಮಾಡಿ ನಾವು ನಮ್ಮ ಜನತೆಗೆ ಅಕ್ಕಿ ಖರೀದಿಸಿ ಅನ್ನಭಾಗ್ಯದಡಿಯಲ್ಲಿ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಕೊಟ್ಟೇ ಕೊಡುತ್ತೇವೆ, ಆದರೆ ಸ್ವಲ್ಪ ತಡವಾಗಬಹುದು ಎಂದು ಹೇಳಿದ್ದಾರೆ.