You are currently viewing BREAKING : ರಾಜ್ಯಾದ್ಯಂತ ಇನ್ನು 2 ದಿನ ಭಾರೀ ಮಳೆ..!!

BREAKING : ರಾಜ್ಯಾದ್ಯಂತ ಇನ್ನು 2 ದಿನ ಭಾರೀ ಮಳೆ..!!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇದೀಗ ಮುಂಗಾರು ಮಳೆ ಚುರುಕುಗೊಂಡಿದ್ದು, ಹಲವಡೆ ಉತ್ತಮ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಅಬ್ಬರದ ಸಾಧ್ಯತೆ ಇದೆ ಎಂದು ತಿಳಿಸಿದೆ.

ಕರಾವಳಿ ಭಾಗದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ರೀತಿಯಲ್ಲಿ ಮಳೆಯಾಗುತ್ತಿದೆ.

ಇಂದು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Prajavikshane

Chandru R Bhanapaur

Leave a Reply

error: Content is protected !!