ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲಾ ಮಕ್ಕಳಿಗೆ ಶಾಕ್ ನೀಡಿದ್ದು, ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕಳೆದ ಸಾಲಿನಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು – ಶೇಂಗಾ ಚಿಕ್ಕಿಯನ್ನ 1 ದಿನಕ್ಕೆ ಕಡಿತಗೊಳಿಸಿ ಆದೇಶಿಸಿದೆ. ಈ ಸಂಬಂಧ ಮುಂದಿನ ತಿಂಗಳು ಜುಲೈ 15 ರವರೆಗೆ ಮಾತ್ರ ಅನ್ವಯಿಸಿ ಈ ಆದೇಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮುಂದಿನ ತಿಂಗಳು ಜುಲೈನಲ್ಲಿ ಹೊಸ ಬಜೆಟ್ ಮಂಡನೆಯಾಗುವ ಹಿನ್ನೆಲೆಯಲ್ಲಿ ಜುಲೈ 15 ರವರೆಗೆ ಮಾತ್ರ ಈ ಆದೇಶ ಅನ್ವಯಿಸುವಂತೆ ಸರ್ಕಾರದ ನಿರ್ದೇಶನದ ಮೇರೆಗೆ ಈ ಆದೇಶ ಮಾಡಲಾಗಿದೆ ಎಂದು ಮಾಹಿತಿ ಇದೆ.