You are currently viewing ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಭಾಗದ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರು ನಗರ ಸೇರಿದಂತೆ ದಕ್ಷಿಣದ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಬರೋಬ್ಬರಿ ನಾಲ್ಕು ದಿನಗಳು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 24 ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ತುಮಕೂರು,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ ಭಾಗದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಆದೇಶಿಸಿದೆ.

Prajavikshane

Chandru R Bhanapaur

Leave a Reply

error: Content is protected !!