ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳ ಜಿ.ಪಂ, ತಾಪಂ.ಗಳ ಚುನಾವಣೆ ಘೋಷಣೆ ಈಗಾಗಲೇ ಮಾಡಬೇಕಾಗಿತ್ತು. ಆದರೆ, ಈವರೆಗೆ ಘೋಷಣೆ ಮಾಡಿಲ್ಲ. ಇದೀಗ ಜಿಲ್ಲಾ, ತಾ.ಪಂ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡನೆಗೆ ಹೈಕೋರ್ಟ್ ಕಾಲಾವಕಾಶ ನೀಡಿದ ಕಾರಣ, ಮತ್ತೆ ಚುನಾವಣೆ ಮುಂದೂಡಿಕೆ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಜಿ.ಪಂ, ತಾ.ಪಂ. ಚುನಾವಣೆ ಸಂಬಂಧದ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆಗೆ ಕಾಲಾವಕಾಶವನ್ನು ರಾಜ್ಯ ಸರ್ಕಾರದ ಪರವಾಗಿ ವಕೀಲ ಎಜೆ ಶಶಿಕಿರಣ್ ಶೆಟ್ಟಿ ಕೇಳಿದರು.
ರಾಜ್ಯ ಸರ್ಕಾರದ ಮನವಿ ಪುರಸ್ಕರಿಸಿದಂತ ಹೈಕೋರ್ಟ್ ಪೀಠವು, 10 ವಾರಗಳ ಕಾಲಾವಕಾಶವನ್ನು ನೀಡಿದೆ. 10 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿಯನ್ನು ಅಂತಿಮಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.