ಬೆಂಗಳೂರು : ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಕನ್ನಡದ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಿದ್ದು, ಇವರ ಜೊತಗೆ ಪಕ್ಷದ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್ ಪಾಠಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಎ ಎ ಪಿ ಮಾಹಿತಿ ನೀಡಿದ್ದು, ‘ರಾಜ್ಯದ ಹೆಸರಾಂತ ರಂಗಭೂಮಿ – ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿಯಾದ ಮುಖ್ಯಮಂತ್ರಿ ಚಂದ್ರು ರವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಅವರನ್ನ ಇಂದು ಎಎಪಿ ಪಕ್ಷದ ವರಿಷ್ಠರು ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಇವರೊಂದಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ರವರುಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.
ಪಕ್ಷದ ಈ ಹಿಂದಿನ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ರವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಗಳನ್ನಾಗಿ ಎಎಪಿ ನೇಮಿಸಲಾಗಿದೆ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.