ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು (ಜುಲೈ 15) ನಾಳೆಯಿಂದ ಜುಲೈ 16 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ನಾಳೆ (ಜುಲೈ 15) ಕಾರಟಗಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸಿ ವಾಸ್ತವ್ಯ ಮಾಡಲಿದ್ದಾರೆ. ಅದೇ ರೀತಿ ಜುಲೈ 16 ರಂದು ಸಹ ಸಾರ್ವಜನಿಕ ಭೇಟಿ ಮತ್ತು ಕುಂದುಕೊರತೆ ವಿಚಾರಣೆ ನಡೆಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ಗಂಗಾವತಿ, ಹೊಸಪೇಟೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಜಿ.ಎಸ್.ಮಧುಸೂದನ ರೆಡ್ಡಿ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.