ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಯಾದ ಕುಟುಂಬದಲ್ಲಿನ ಒಬ್ಬ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡುವ “ಗೃಹ ಲಕ್ಷ್ಮಿ ಯೋಜನೆ”ಯ ಅಡಿಯಲ್ಲಿ ಜಮಾ ಆಗದೇ ಇದ್ದರೇ, ಏನು ಮಾಡಬೇಕು ಎನ್ನುವ ಬಗ್ಗೆಯೂ ಸರ್ಕಾರ ಮಾಹಿತಿಯನ್ನು ನೀಡದೆ.
ಇಂದು ಈ ಬಗ್ಗೆ ಅಧಿಕೃತವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಧೀನ ಕಾರ್ಯದರ್ಶಿ, ‘ಗೃಹ ಲಕ್ಷ್ಮಿ ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯತೆ ಇಲ್ಲ. 8147500500 ಈ ಸಂಖ್ಯೆ ಎಸ್ಎಂಎಸ್ ಅಥವಾ ಕಾಲ್ ಮಾಡಬಹುದು. ಜೊತಗೆ ಇನ್ನೂ ಗೊಂದಲವಿದ್ದರೆ ಇಲಾಖೆ 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದೆ.