ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸಹ ಭಾಗಿಯಾಗಿದ್ದರು. ಈ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಅವರು ಲೋಕಸಭಾ ಚುನಾವಣೆಯ ಖಡಕ್ ಸೂಚನೆ ಒಂದನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳಿಂದ ಹೊರಬಿದ್ದಿದೆ.
ಕಳೆದ 2019ರ ಚುನಾವಣೆಯಲ್ಲಿ ಬಿಜೆಪಿ (BJP) 25 ಕ್ಷೇತ್ರಗಳನ್ನ ಗೆದ್ದಿತ್ತು. ಕಾಂಗ್ರೆಸ್ ಒಂದರಲ್ಲಿ ಮಾತ್ರ ಗೆಲುವು ಕಂಡಿತ್ತು. ಈಗ ಈ ಬಾರಿ ರಾಜ್ಯದಲ್ಲಿ ಬಹುಮತದ ನಮ್ಮದೇ ಸರ್ಕಾರ ಇದೆ. ಹಾಗಾಗಿ 20ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ರೀತಿ ರಣನೀತಿ ರೂಪಿಸಬೇಕು ಎಂದು ಸೋನಿಯಾ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಸಲಹೆ ಹಾಗೂ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಸಭೆಯ ನಡುವೆಯೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಪ್ರತ್ಯೇಕವಾಗಿ ಸೋನಿಯಾ ಗಾಂಧಿ ಲೋಕಸಭಾ ಚುನಾವಣೆ ತಯಾರಿ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ ತಿಳಿದು ಬಂದಿದೆ. ಈ ವೇಳೆ ಈ ಬಾರಿಯ ಲೋಕಚಭೆ ಚುನಾವಣೆಯ ಸಮರದ ಟಾರ್ಗೆಟ್ ನೀಡಿದ್ದಾರೆ ಎಂದು ಹೇಳಲಾಗಿದೆ.