ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಯಾದ “ಗೃಹ ಲಕ್ಷ್ಮೀ ಯೋಜನೆ” ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ 2,000 ರೂ. ನೇರವಾಗಿ ಸಂದಾಯವಾಗಲಿದೆ. ಅದು ಅಲ್ಲದೇ ಯಾರು ಇನ್ನು ಅರ್ಜಿ ಹಾಕಿಲ್ಲ ಅವರಿಗೂ ಇಂದಿನಿಂದ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಕುಟುಂಬದ ಯಜಮಾನಿ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.
ಹೀಗೆ ಅರ್ಜಿ ಸಲ್ಲಿಸಿದಂತ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಆಗಸ್ಟ್ 16ರಂದು ಗೃಹ ಲಕ್ಷ್ಮಿ ಯೋಜನೆಯಡಿ 2,000 ರೂ. ಖಾತೆಗೆ ಜಮಾ ಆಗಲಿದೆ ಎಂದು ಇಲಾಖೆ ತಿಳಿಸಿದೆ. ನಿನ್ನೆ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಧಾನಸೌಧದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರು.
ಈ ಚಾಲನೆಯ ಬಳಿಕ ಇಂದಿನಿಂದ ಗೃಹ ಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಶುರುವಾದಂತೆ ಆಗಿದೆ. ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರು ತಮ್ಮ ಆಧಾರ್, ಬ್ಯಾಂಕ್ ಖಾತೆ ವಿವರ, ಪಡಿತರ ಚೀಟಿಗಳೊಂದಿಗೆ ಸೇವಾ ಕೇಂದ್ರಗಳಿಗೆ ತೆರಳಿ “ಗೃಹ ಲಕ್ಷ್ಮಿ ಯೋಜನೆ”ಗಾಗಿ ನೋಂದಣಿ ಮಾಡಿಸಬಹುದಾಗಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.