BREAKING : ಭಾರೀ ಮಳೆ : ಶಾಲೆಗಳಿಗೆ ರಜೆ ಘೋಷಣೆ..!!

You are currently viewing BREAKING : ಭಾರೀ ಮಳೆ :  ಶಾಲೆಗಳಿಗೆ ರಜೆ ಘೋಷಣೆ..!!

ಬೆಳಗಾವಿ : ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಅದರಂತೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕಿತ್ತೂರು ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದೆ.

ಈ ಕುರಿತು ಹೇಳಿಕೆ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ, ಲೋಂಡಾ, ಜಾಂಬೋಟಿ ಭಾಗದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ ಎಂದಿದ್ದಾರೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಕಾಡಂಚಿನ ಮಕ್ಕಳು ಶಾಲೆಗೆ ತೆರಳಲು ಪರದಾಡುವಂತ ಸ್ಥಿತಿ ಉಂಟಾಗಿದೆ. ಹೀಗಾಗಿ ಖಾನಾಪುರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!