BIG BREAKING : ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆ : ಕೊಪ್ಪಳ ಜಿಲ್ಲೆಗೆ ಮತ್ತೆ ವರುಣನ ಕಾಟ..!!

You are currently viewing BIG BREAKING : ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆ : ಕೊಪ್ಪಳ ಜಿಲ್ಲೆಗೆ ಮತ್ತೆ ವರುಣನ ಕಾಟ..!!

ರಾಜ್ಯದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಬೆಳಗಾವಿ,ಕಲಬುರಗಿ ಮತ್ತು ಬೀದರ ಜಿಲ್ಲೆಗಳಲ್ಲಿ ಅರುಣನ ಅರ್ಭಟದಿಂದ ಕೆಲ ಪ್ರದೇಶಗಳು ಜಲಾವೃತಗೊಂಡಿವೆ. ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.

ರಾಜ್ಯದ ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಬೀದರ, ಧಾರವಾಡ, ಕಲಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದದ್ದು, ಉಳಿದಂತೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಯಪುರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಗಾಳಿಯ ವೇಗವು ಈ ಭಾಗದಲ್ಲಿ ಪ್ರತಿ ಘಂಟೆಗೆ 30-40 ಕಿಮೀ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಅದರಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಇರಲಿದೆ ಎಂದು ವರದಿ ಮಾಡಿದೆ.

Leave a Reply

error: Content is protected !!