You are currently viewing ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿಯವರ ನಾಳೆಯ ಜಿಲ್ಲಾ ಪ್ರವಾಸ ಹೀಗಿದೆ..!!

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿಯವರ ನಾಳೆಯ ಜಿಲ್ಲಾ ಪ್ರವಾಸ ಹೀಗಿದೆ..!!


ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ನಾಳೆ (ಜುಲೈ 24) ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಇಂದು (ಜುಲೈ 23ರಂದು) ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ಬಾಗಲಕೋಟೆ ಜಿಲ್ಲೆಯ ಇಳಕಲ್‌ಗೆ ತೆರಳಿ ವಾಸ್ತವ್ಯ ಮಾಡುವರು. ಜುಲೈ 24ರ ಬೆಳಗ್ಗೆ 9 ಗಂಟೆಗೆ ಇಳಕಲ್‌ನಿಂದ ನಿರ್ಗಮಿಸಿ ಕುಷ್ಟಗಿ ತಾವರಗೇರಾ ಹುಲಿಹೈದರ ಮಾರ್ಗವಾಗಿ ಕನಕಗಿರಿ ತಾಲೂಕಿಗೆ ಆಗಮಿಸಿ ಬೆಳಗ್ಗೆ 10.30ಕ್ಕೆ ಕನಕಗಿರಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ವಾರ್ಡಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 7 ಗಂಟೆಗೆ ಕನಕಗಿರಿ ಪಟ್ಟಣದಿಂದ ನಿರ್ಗಮಿಸಿ 7.30ಕ್ಕೆ ಕಾರಟಗಿಗೆ ತೆರಳಿ ಸಾರ್ವಜನಿಕ ಭೇಟಿ ಹಾಗೂ ಕುಂದುಕೊರತೆಗಳ ವಿಚಾರಣೆ ನಡೆಸಲಿದ್ದಾರೆ.

ಇದೇ ಜುಲೈ 25ರ ಬೆಳಗ್ಗೆ 10 ಗಂಟೆಯಿAದ ಕಾರಟಗಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡಗಳಿಗೆ ಭೇಟಿ ನೀಡಿ, ಬಳಿಕ ಸಂಜೆ 5 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ಗಂಗಾವತಿ, ಹೊಸಪೇಟೆ, ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!