You are currently viewing BIG BREAKING : “ಗೃಹಲಕ್ಷ್ಮೀ ಯೋಜನೆ”ಗೆ ಅರ್ಜಿ ಸಲ್ಲಿಸುವಾಗ ಹಣ ಪಡೆದ ಪ್ರಕರಣ : ಮಹತ್ವದ ಆದೇಶ ಹೊರಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!!

BIG BREAKING : “ಗೃಹಲಕ್ಷ್ಮೀ ಯೋಜನೆ”ಗೆ ಅರ್ಜಿ ಸಲ್ಲಿಸುವಾಗ ಹಣ ಪಡೆದ ಪ್ರಕರಣ : ಮಹತ್ವದ ಆದೇಶ ಹೊರಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!!

ಬಾಲಗಕೋಟೆ : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವಾಗ ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ ಲಾಗಿನ್ ಐಡಿ ರದ್ದು ಮಾಡಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಬಾಗಲಕೋಟೆಯ ಶೂರ್ಪಾಲಿಯ ಗ್ರಾಮ ಒನ್ ಗ್ರಾಮದಲ್ಲಿ ನಡೆದಿದೆ .

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಹಣ ಕೇಳಿದ್ದಕ್ಕೆ ಸಿದ್ದಪ್ಪ ಎಂಬುವವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದರು. ಇದರ ವಿಡಿಯೋ ಭಾರೀ ವೈರಲ್‌ ಆಗಿತ್ತು, ಈ ಕುರಿತು ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶವನ್ನು ಒಂದನ್ನು ಹೊರಡಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, “ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ “ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ. ಸರಕಾರದ ಮಹತ್ವಾಕಾಂಕ್ಷಿಯ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ” ಎಂದು ತಮ್ಮ ಫೇಸ್‌ ಬುಕ್‌ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ವರದಿ : ಚಂದ್ರು ಆರ್‌ ಭಾನಾಪೂರ್‌

Prajavikshane

Chandru R Bhanapaur

Leave a Reply

error: Content is protected !!