ರಾಜ್ಯದಲ್ಲಿ ಕೆಲವು ದಿನಗಳಿಂದ ಹವಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಬರುತ್ತಿರುವ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಕೆಲವು ಜನರಲ್ಲಿ ಕಣ್ಣಿನ ಉರಿ ಕೆಳಕಂಡಂತೆ ಮಾಹಿತಿಯನ್ನು ತಿಳಿಸುವುದು ಹಾಗೂ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಆಸ್ಪತ್ರೆಗಳಲ್ಲಿ ಬಂದ ಕಣ್ಣಿನ ಉರಿ ಊತದ ರೋಗಿಗಳಿಗೆ ವೈದ್ಯರು ನೋವು ನಿವಾರಕ ಮಾತ್ರೆ ಮತ್ತು ಕಣ್ಣಿನ ಡ್ರಾಪ್ಸ್ ಚಿಕಿತ್ಸೆ ನೀಡುವುದು, ಮೂಗಿನ ಮತ್ತು ಗಂಟಲಿನ ಸೊಂಕು ಇದ್ದಲ್ಲಿ ಅದಕ್ಕೆ ಬೇಕಾದ ಚಿಕಿತ್ಸೆ ನೀಡುವುದು. ಶಸ್ತ್ರ ಚಿಕಿತ್ಸೆ ಒಳಪಟ್ಟಿರುವ ರೋಗಿಗಳು ಮತ್ತು ಕಣ್ಣಿನ ಉರಿ ಊತ ಇರುವ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಅಂಧತ್ವ ನಿಯಂತ್ರಣ ವಿಭಾಗ ಜಂಟಿ ನಿರ್ಧೆಶರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
✪ (Conjunctivitis) ಈ ಸಮಸ್ಯೆ ಕಂಡುಬರುತ್ತಿರುವ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಈ ಕಣ್ಣಿನ ಉರಿ ಊತ ಕಾಣಿಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ ✪
ಈ ರೋಗದ ಲಕ್ಷಣಗಳು:-
➤ ಕಣ್ಣಿನ ಬಿಳಿ ಭಾಗವು ಕೆಂಪಾಗುತ್ತದೆ.
➤ ಕಣ್ಣುಗಳಲ್ಲಿ ಉರಿ ಮತ್ತು ನೋವು ಇರುತ್ತದೆ. • ಕಣ್ಣುಗಳಿಂದ ನಿರಂತರವಾಗಿ ನೀರು ಹೊರಬರುತ್ತಿರುತ್ತದೆ.
➤ ಕಣ್ಣುಗಳು ಊದಿಕೊಳ್ಳುತ್ತದೆ.
✪ ಮುನ್ನೆಚ್ಚರಿಕೆ ಕ್ರಮಗಳು ✪
➤ ಹೆಚ್ಚಿನ ಜನ ಇರುವ ಪ್ರದೇಶಗಳಿಗೆ ಹೋಗುವುದನ್ನು ಕಡಿಮೆ ಮಾಡಬೇಕು. • ಪದೇ ಪದೇ ಕಣ್ಣುಗಳನ್ನು ಮುಟ್ಟುವುದನ್ನು ಕಡಿಮೆ ಮಾಡಬೇಕು.
➤ ಸೋಪ್ ನಲ್ಲಿ ಆಗಾಗ ಕೈ ತೊಳೆಯುವುದನ್ನು ಅಭ್ಯಾಸ ಮಾಡಬೇಕು.
➤ ಕಣ್ಣಿನ ಉರಿ ಊತ ಬಂದ ವ್ಯಕ್ತಿ ಬೇರೆಯವರ ಜೊತೆ ನಿಕಟ ಸಂಪರ್ಕ ಹೊಂದುವುದನ್ನು ತಪ್ಪಿಸಬೇಕು.
➤ ಅವರು ಉಪಯೋಗಿಸಿದ ಟವೆಲ್, ತಲೆ ದಿಂಬನ್ನು ಇತರರು ಉಪಯೋಗಿಸದಂತೆ ನೋಡಿಕೊಳ್ಳಬೇಕು.
ವರದಿ : ಚಂದ್ರು ಆರ್ ಭಾನಾಪೂರ್