BIG UPDATE : ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿ ಕೇಸ್‌ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಶಿಫಾರಸ್ಸು

You are currently viewing BIG UPDATE : ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿ ಕೇಸ್‌ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಶಿಫಾರಸ್ಸು

ನವದೆಹಲಿ : ಇಡೀ ದೇಶವೇ ತಲೆತಗ್ಗಿಸುವ ಘಟನೆ ನಡೆದಿದ್ದ ಮಣಿಪುರದಲ್ಲಿನ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣವನ್ನು ಇದೀಗ ಸಿಬಿಐ ತನಿಖೆಗೆ ಗೃಹ ಸಚಿವಾಲಯ ಶಿಫಾರಸ್ಸು ಮಾಡಿದೆ. ಅದು ಅಲ್ಲದೇ ಮಣಿಪುರದ ಹೊರಗೆ ಕೋರ್ಟ್ ವಿಚಾರಣೆ ನಡೆಸಲು ಅನುಮತಿ ನೀಡಬೇಕು. 6 ತಿಂಗಳಲ್ಲಿ ವಿಚಾರಣೆ ಮುಗಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.

ಈ ಕುರಿತು ನಿನ್ನೆ (ಗುರುವಾರ) ರಾತ್ರಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತನ್ನ ನಿಲುವಿನ ಅಫಿಡವಿಟ್ ಸಲ್ಲಿಸಿತ್ತು, ಈ ಬಗ್ಗೆ ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, ಇದು ಭೀಭತ್ಸ ಘಟನೆಯಾಗಿದ್ದು, ಹೀಗಾಗಿ ಕೇಂದ್ರ ಸರ್ಕಾರ ಈ ವಿಷಯದಲ್ಲಿ ತಾತ್ಸಾರ ತಾಳುವುದಿಲ್ಲ. ನಿಷ್ಪಕ್ಷಪಾತ ತನಿಖೆ ಉದ್ದೇಶದಿಂದ ನಗ್ನ ಪರೇಡ್ ವಿಡಿಯೋ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ. ಅಸ್ಸಾಂ ಕೋರ್ಟ್ ನಲ್ಲಿ ಇದರ ವಿಚಾರಣೆಗೆ ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈವರೆಗೂ ಮಣಿಪುರದ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಘಟನೆಗೆ ಸಂಬಂಧಿಸಿದಂತೆ 8 ಜನರನ್ನು ಬಂಧಿಸಿದ್ದಾರೆ. ಇನ್ನೂ ಸುಮಾರು 6 ಜನರ ಪತ್ತೆಗೆ ಈಗಾಗಲೇ ಅಲ್ಲಿನ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

ವರದಿ: ಚಂದ್ರು ಆರ್‌. ಭಾನಾಪೂರ್‌

Leave a Reply

error: Content is protected !!