ಕೊಪ್ಪಳ : ಜಲಜೀವನ್ ಮಿಷನ್ ಜೆ.ಜೆ.ಎಂ ಯೋಜನೆಯ ಅನುಷ್ಠಾನ ಕಾಮಗಾರಿಗಳನ್ನು ಪರಿಶೀಲಿಸಲು ಈಗಾಗಲೇ ಹೋಬಳಿಮಟ್ಟದಲ್ಲಿ ರಚಿಸಲಾದ ತಂಡಗಳು ಸಕ್ರಿಯವಾಗಿ ಕರ‍್ಯನರ‍್ವಹಿಸಬೇಕು. ತ್ವರಿತಗತಿಯಲ್ಲಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯ ನರ‍್ವಾಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಕಚೇರಿಯ ಜೆ.ಹೆಚ್.ಪಟೇಲ್ ಸಭಾಗಣದಲ್ಲಿ ಜುಲೈ 27ರಂದು ಸಂಬಂಧಿಸಿದ ಯೋಜನೆಯ ಅನುಷ್ಠಾನಾಧಿಕಾರಿಗಳು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಜೆಜೆಎಂ ಕಾಮಗಾರಿ ಪ್ರಗತಿ ಪರಿಶೀಲನೆ ನಿಯಮಿತವಾಗಿ ನಡೆಯಲಿದೆ. ಬರುವ ಆಗಸ್ಟ್ 04ರಂದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಜೆ.ಜೆ.ಎಂ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ಆ ಕ್ಷೇತ್ರದ ಶಾಸಕರು ಹಾಗೂ ತಮ್ಮ ಸಮ್ಮುಖದಲ್ಲಿ ನಡೆಯಲಿದೆ. ಅದೇ ರೀತಿ ಇನ್ನುಳಿದ ವಿಧಾನಸಭಾ ಕ್ಷೇತ್ರಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಹ ವಾರಕ್ಕೆ ಒಂದರಂತೆ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಸುವುದಾಗಿ ತಿಳಿಸಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನರ‍್ಮಲ್ಯ ಇಲಾಖೆ ಕೊಪ್ಪಳ ವಿಭಾಗದ ಅಭಿಯಂತರರು, ಆಯಾ ಹೋಬಳಿಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.